ಮೇ 16ರಂದು ನಗರಕ್ಕೆ ನೀರು ಸರಬರಾಜು ಇಲ್ಲ
ಮ0ಗಳೂರು: ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ಬರುವ 80 ಎಂ.ಎಲ್.ಡಿ ಹಾಗೂ 18 ಎಂ.ಜಿ.ಡಿ ನೀರು ಪೂರೈಕೆಯ ಮೂಲವಾದ ತುಂಬೆಯ ಕೆಳಗಿನ ರೇಚಕ ಸ್ಥಾವರಗಳಿಗೆ ಸಂಬಂಧಿಸಿದ ಜಾಕ್ ವೆಲ್ನಲ್ಲಿ ನೇತ್ರಾವತಿ ನದಿಯ ನೀರಿನಲ್ಲಿ ಹರಿದು ಬರುವ ತ್ಯಾಜ್ಯ ವಸ್ತುಗಳು, ಕಸಕಡ್ಡಿಗಳು, ಮಡ್ಡಿ ಮರಳು ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್ವೆಲ್ಗಳಲ್ಲಿ ಶೇಖರಣೆಗೊಂಡಿರುವ ತ್ಯಾಜ್ಯ ವಸ್ತುಗಳು, ಮಡ್ಡಿಯನ್ನು ಶುಚಿಗೊಳಿಸುವ ಕಾರ್ಯವನ್ನು ಮೇ 16ರಂದು ಬೆಳಿಗ್ಗೆ 6ರಿಂದ ಸಂಜೆ 6ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. ಸದ್ರಿ ಅವಧಿಯಲ್ಲಿ ಮಂಗಳೂರು ನಗರಕ್ಕೆ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.