ಮೇ 16ರಿಂದ 19 ರ ವರೆಗೆ ಉಡುಪಿಯಲ್ಲಿ  ಮಾವು ಮೇಳ

Spread the love

ಮೇ 16ರಿಂದ 19 ರ ವರೆಗೆ ಉಡುಪಿಯಲ್ಲಿ  ಮಾವು ಮೇಳ

ಉಡುಪಿ: ಜಿಲ್ಲಾ ತೋಟಗಾರಿಕಾ ಇಲಾಖೆ ಹಾಗೂ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ರಾಮನಗರ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಮೇ16ರಿಂದ 19ರವರೆಗೆ ನಡೆಯಲಿದೆ.

ದೊಡ್ಡಣಗುಡ್ಡೆಯಲ್ಲಿರುವ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದಲ್ಲಿರುವ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.

ರಾಮನಗರ ಜಿಲ್ಲೆ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ರಾಮನಗರ ಜಿಲ್ಲೆಯಿಂದ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ ಮುಂತಾದ ತಳಿಗಳ ಒಟ್ಟು 40 ಟನ್‌ನಷ್ಟು ಮಾವು ಮಾರಾಟಕ್ಕೆ ಅಲ್ಲಿನ 15-20 ರೈತರು ಆಗಮಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕಿ ಭುವನೇಶ್ವರಿ ತಿಳಿಸಿದ್ದಾರೆ.

ಈ ಮೇಳದಲ್ಲಿ ಜಿಲ್ಲೆಯ ಮಾವು ಬೆಳೆಗಾರರಿಗೂ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯ ಮಾವು ಬೆಳೆಗಾರರು ಮೇ 15ರ ಒಳಗೆ ತಾವು ಬೆಳೆದ ಮಾವಿನ ತಳಿ ಹಾಗೂ ಲಭ್ಯತೆಯ ವಿವರದೊಂದಿಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ (ಮೊ:9141407672) ಕಚೇರಿಯನ್ನು ಸಂಪರ್ಕಿಸಿ ಮೇಳದಲ್ಲಿ ಭಾಗವಹಿಸ ಬಹುದು ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.


Spread the love