Home Mangalorean News Kannada News ಮೇ.4 ರಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ...

ಮೇ.4 ರಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ : ಡಿಸಿ ಸಿಂಧೂ ರೂಪೇಶ್

Spread the love

ಮೇ.4 ರಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ : ಡಿಸಿ ಸಿಂಧೂ ರೂಪೇಶ್

ಮಂಗಳೂರು: ಮೇ.4 ರಿಂದ ದ.ಕ ಜಿಲ್ಲೆಯಲ್ಲಿ ಬೆ.7 ರಿಂದ ರಾತ್ರಿ 7ರ ವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತದೆ ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅಧಿಕೃತ ಆದೇಶ ಹೊರಡಸಿದ್ದಾರೆ.

ಮೇ 4 ರಿಂದ ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗುವುದು.

ಸ್ಥಳೀಯ ಅಂಗಡಿಗಳು,ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಅನುಮತಿ ಇದ್ದು, ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸಕ್ಕೆ ಅನುಮತಿ ನೀಡಲಾಗಿದೆ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ, ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ, ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲಷ್ಟೇ ಅನುಮತಿ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಆದರೆ ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್ ಇರಲಿದ್ದು, ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳು ನಿಷೇಧ ಇದೆ. ರಾತ್ರಿ 7 ರಿಂದ ಬೆ.7ರ ವರೆಗೆ ಎಲ್ಲಾ ರೀತಿಯ ಸಂಚಾರ,ಸೇವೆ ಬಂದ್ ಇರಲಿದೆ ಎಂದು ಅವರು ತಿಳಿಸಿದ್ದಾರೆ.


Spread the love

Exit mobile version