ಮೈತ್ರಿ ಸರಕಾರದ ಆಂತರಿಕ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ – ಶೋಭಾ ಕರಂದ್ಲಾಜೆ
ಉಡುಪಿ: ಮೈತ್ರಿ ಸರಕಾರದ ಆಂತರಿಕ ಗೊಂದಲಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಅವರೇ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಅವರು ಶನಿವಾರ ಉಡುಪಿಯಲ್ಲಿ ಮಾತನಾಡಿ ಮೈತ್ರಿ ಸರಕಾರದ ಆಂತರಿಕ ಗೊಂದಲ ಬಹಿರಂಗವಾಗಿದೆ. ಆನಂದ್ ಸಿಂಗ್ ರಾಜೀನಾಮೆ ಕೊಟ್ಟಾಗಲೇ ಕಾಂಗ್ರೆಸ್ ಎಚ್ಚೆತ್ತುಕೊಳ್ಳಬೇಕಿತ್ತು. ಕುಮಾರಸ್ವಾಮಿ ಸಿದ್ದರಾಮಯ್ಯ, ಪರಮೇಶ್ವರ್, ರೇವಣ್ಣ ವರ್ತನೆಯಿಂದ ಜನ ರೋಸಿ ಹೋಗಿದ್ದಾರೆ.
ಕುಮಾರಸ್ವಾಮಿ ಯನ್ನು ಸಿಎಂ ಅಂತ ಒಪ್ಪಿಕೊಳ್ಳಲು ಸಿದ್ದರಾಮಯ್ಯ ತಯಾರಿಲ್ಲ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರನ್ನು ಎತ್ತಿಕಟ್ಟಿದ್ದಾರೆ ಆಂತರಿಕ ಜಗಳ ಹೆಚ್ಚು ಮಾಡಿದ್ದೇ ಸಿದ್ದರಾಮಯ್ಯ ಆದ್ದರಿಂದ ಮೋದಿ ಯಡಿಯೂರಪ್ಪ ಅವರ ಕಡೆ ಕೈ ತೋರಿಸಬೇಡಿ. ಸರಕಾರ ಬೀಳೋಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಾರಣ
ಬೇರೆ ಪಕ್ಷದ ಸದಸ್ಯರಲ್ಲದವರು ಬಿಜೆಪಿಗೆ ಬರಬಹುದು, ರಾಜೀನಾಮೆ ಸ್ವೀಕಾರವಾದ ಮೇಲೆ ಯಾರೂ ಬಿಜೆಪಿಗೆ ಸೇರಬಹುದು ಎಂದು ಸಂಸದೆ ಶೋಭಾ ಕರಂದ್ಲಾಜ ಆಹ್ವಾನ ನೀಡಿದ್ದಲ್ಲದೆ ಮೋದಿಯ ಯೋಜನೆ ಅನುಷ್ಟಾನಕ್ಕೆ ತರುವ ಸರಕಾರ ರಾಜ್ಯದಲ್ಲಿ ಬರಬೇಕು ಎಂದರು.
ಬರಗಾಲ ಇದ್ದಾಗಲೇ ಸಿಎಂ ಅಮೇರಿಕಾ ಪ್ರವಾಸದಲ್ಲಿದ್ದಾರೆ. ಮೊದಲು ಉಡುಪಿಯ ರೆಸಾರ್ಟಲ್ಲಿ ಸಿಎಂ ಮಸಾಜ್ ಮಾಡಿಸಿದರು ಬಳಿಕ ಗ್ರಾಮ ವಾಸ್ತವ್ಯದ ನಾಟಕವಾಡಿ ಅಮೇರಿಕಾಕ್ಕೆ ಹೋದರು ಸಿಎಂ ವಾಪಾಸ್ಸಾಗುವಾಗ ಕಾಂಗ್ರೆಸ್ ಯಾವ ನಾಟಕ ಆಡುತ್ತೋ ನೋಡಬೇಕು ಎಂದರು
ರಾಜ್ಯದ ಬೆಳವಣಿಗೆಯನ್ನು ರಾಜ್ಯಪಾಲರು ಗಮನಿಸಬೇಕು, 15 ಜನ ರಾಜೀನಾಮೆ ಕೊಟ್ಟರೆ ಸರಕಾರಕ್ಕೆ ಬಹುಮತ ಇಲ್ಲ ರಾಜೀನಾಮೆ ಕೊಟ್ಟವರು ಬಿಜೆಪಿ ಸಂಪರ್ಕದಲ್ಲಿ ಇಲ್ಲ ಕಾಂಗ್ರೆಸ್ ನಾಯಕರ ನಡವಳಿಕೆಯೇ ಶಾಸಕರ ರಾಜೀನಾಮೆಗೆ ಕಾರಣ.
ಬಿಜೆಪಿ ಸಿದ್ಧಾಂತ- ಮೋದಿಯನ್ನು ಒಪ್ಪಿ ಯಾರೂ ಪಕ್ಷಕ್ಕೆ ಬರಬಹುದು, ಜಿ.ಟಿ ದೇವೇಗೌಡ ಹಿಂದೆ ನಮ್ಮ ಜೊತೆ ಇದ್ದರು ಅಲ್ಲಿ ಬೇಸರ ಆದ್ರೆ ಯಾವತ್ತೂ ಜಿಟಿಡಿ ಬಿಜೆಪಿಗೆ ಬರಬಹುದು. ಗೊಂದಲ ನಿವಾರಣೆಗೆ ಡಿಕೆಶಿ ಎಂಟ್ರಿ ಬಹಳ ವಿಳಂಬವಾಗಿದ್ದು, ಜಿಂದಾಲ್ ಪರಾಬಾರೆಗೆ ಡಿಕೆಶಿಯೇ ಕಾರಣ ಸ್ಪೀಕರ್ ಕಚೇರಿಗೆ ಈಗ ಹೋಗಿ ಸಮಾಧಾನ ಮಾಡಿದರೆ ಪ್ರಯೋಜನ ಇಲ್ಲ ಎಂದರು.