Home Mangalorean News Kannada News ಯಾದಗಿರಿ ಪಿಎಸೈ ಸಾವಿನ ಬೆನ್ನಲ್ಲೇ ಇನ್ನೋರ್ವ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ!

ಯಾದಗಿರಿ ಪಿಎಸೈ ಸಾವಿನ ಬೆನ್ನಲ್ಲೇ ಇನ್ನೋರ್ವ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ!

Spread the love

ಯಾದಗಿರಿ ಪಿಎಸೈ ಸಾವಿನ ಬೆನ್ನಲ್ಲೇ ಇನ್ನೋರ್ವ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ!

ಬೆಂಗಳೂರು: ಪಿಎಸ್ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಎರಡು ತಿಂಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸಿಸಿಬಿ ವಿಭಾಗಕ್ಕೆ ವರ್ಗ ಮಾಡಲಾಗಿತ್ತು. ಕುಟುಂಬದವರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಗೆ ದೇಹವನ್ನು ಕಳುಹಿಸಲಾಗಿದೆ.

ತಿಮ್ಮೇಗೌಡ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Spread the love

Exit mobile version