ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ವತಿಯಿಂದ ಗೂಡು ದೀಪ ಸ್ಪರ್ಧೆ
ಉಡುಪಿ: ದೀಪಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ವತಿಯಿಂದ ಉಭಯ ಜಿಲ್ಲಾ ಮಟ್ಟದ ಗೂಡುದೀಪಗಳ ಸ್ಪರ್ಧೆಯನ್ನು ಅಕ್ಟೋಬರ್ 27 ರಂದು ಬೋರ್ಡ್ ಶಾಲಾ ಮೈದಾನ (ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿಯಲ್ಲಿ ಸಂಜೆ 6 ಗಂಟೆಗೆ ನಡೆಯಲಿದೆ.
ಸ್ಪರ್ಧೆಗಳು ಎರಡು ವಿಭಾಗಗಳಲ್ಲಿ ಸಾಂಪ್ರದಾಯಿಕ ಗೂಡುದೀಪ ಹಾಗೂ ಆಧುನಿಕ ಗೂಡು ದೀಪ ನಡೆಯಲಿದ್ದು ಎಲ್ಲಾ ವಿಭಾಗಳಲ್ಲಿ ಪ್ರತ್ಯೇಕ ಬಹುಮಾನಗಳಿರುತ್ತವೆ. ಅಕ್ಟೋಬರ್ 27 ರಂದು ಬೋರ್ಡ್ ಶಾಲಾ ಮೈದಾನ (ಕರ್ನಾಟಕ ಪಬ್ಲಿಕ್ ಸ್ಕೂಲ್) ಪಡುಬಿದ್ರಿಯಲ್ಲಿ ಸಂಜೆ 6 ಗಂಟೆಗೆ ಪ್ರದರ್ಶನ ನಡೆಯಲಿದೆ.
ಗೂಡುದೀಪ ಸ್ಪರ್ಧೆಯ ನಿಯಮಾವಳಿಗಳು
- ಸಾಂಪ್ರದಾಯಿಕ ಮತ್ತು ಅಧುನಿಕ ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಯಲಿರುವುದು.
- ಪ್ರತಿ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ವಿಜೇತರಿಗೆ ನಗದು ,ಶ್ವಾಶತ ಫಲಕ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
- ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು.
- ಅಕ್ಟೋಬರ್ 27 ರಂದು ಸಂಜೆ 5:00 ಗಂಟೆಗೆ ತಮ್ಮ ಗೂಡುದೀಪದೊಂದಿಗೆ ಶಾಲಾ ಮೃೆದಾನದಲ್ಲಿ ಹಾಜರಿರ ತಕ್ಕದು.
- ಎಲ್ಲಾ ಗೂಡುದೀಪಗಳಿಗೆ ವಿದ್ಯುತ್ ದೀಪದ ವ್ಯವಸ್ಥೆ ಮಾಡಿ ಕೂಡಲಾಗುವುದು.
- ಸ್ಪರ್ಧಾಳುಗಳು ಸ್ಪರ್ಧೆಗೆ ಸಂಬಂಧ ಪಟ್ಟ ಪರಿಕರಗಳನ್ನು ತಾವೇ ತರತಕ್ಕದ್ದು.
- ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಾಯಿಸಿಕೊಳ್ಳಲು ಅಕ್ಟೋಬರ್ 25 ಕೊನೆಯ ದಿನಾಂಕವಾಗಿದ್ದು ದೂರವಾಣಿ ಸಂಖ್ಯೆ: 7090460951ಕ್ಕೆ ಕರೆ ಮಾಡಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.