ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ರದ್ದು: ಬಿ.ಎಸ್. ಯಡಿಯೂರಪ್ಪ ಆದೇಶ
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಟಿಪ್ಪು ಜಯಂತಿಯನ್ನು ಜಾರಿಗೆ ತಂದಿದ್ದರು.
ಮಾಜಿ ವಿಧಾನಸಭಾಧ್ಯಕ್ಷ ಹಾಗೂ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು, ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವೇಳೆ ಕೊಡಗಿನಲ್ಲಿ ಹಿಂಸಾಚಾರ ನಡೆದು ಸಾಕಷ್ಟು ಸಾವುನೋವು ಸಂಭವಿಸಿತ್ತು. ಆದ್ದರಿಂದ, ಆಚರಣೆಯನ್ನು ರದ್ದು ಗೊಳಿಸುವಂತೆ ಸಿಎಂ ಯಡಿಯೂರಪ್ಪ ನವರಿಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ, ಆಚರಣೆಯನ್ನು ರದ್ದುಗೊಳಿಸಿ ಆದೇಶಿಸಿದರು.