Home Mangalorean News Kannada News ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ಡಾ.ಯು.ಟಿ.ಇಫ್ತಿಕಾರ್ ಫರೀದ್‌ ನೇಮಕ

ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ಡಾ.ಯು.ಟಿ.ಇಫ್ತಿಕಾರ್ ಫರೀದ್‌ ನೇಮಕ

Spread the love

ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾಗಿ ಡಾ.ಯು.ಟಿ.ಇಫ್ತಿಕಾರ್ ಫರೀದ್‌ ನೇಮಕ

ಮಂಗಳೂರು: ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಡಾ.ಎಂ.ವಿ. ಶೆಟ್ಟಿ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಯು.ಟಿ.ಇಫ್ತಿಕಾರ್ ಫರೀದ್‌ ಅವರನ್ನು ನೂತನ ಅಧ್ಯಕ್ಷರಾಗಿ ರಾಜ್ಯ ಸರಕಾರ ನೇಮಿಸಿದೆ.

ನ್ಯಾಷನಲ್ ಕಮಿಷನ್ ಫಾರ್ ಅಲೈಡ್ ಎಂಡ್ ಹೆಲ್ತ್ ಕೇರ್ ಪ್ರೊಫೆಷನ್ಸ್ ಆಕ್ಟ್ 2021 ರಡಿ ಈ ಹೊಸ ರಾಜ್ಯ ಅಲೈಡ್ ಎಂಡ್ ಹೆಲ್ತ್ ಕೇರ್ ಕೌನ್ಸಿಲ್ ರಚಿಸಲಾಗಿದೆ. ಕೌನ್ಸಿಲ್‌ನ ಸದಸ್ಯರಾಗಿ ಪದನಿಮಿತ್ತ ಸದಸ್ಯರಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ – ಬೆಂಗಳೂರು ಇದರ ನಿರ್ದೇಶಕರು , ಕಲಬುರಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ- ಕಲಬುರಗಿ ಇದರ ನಿರ್ದೇಶಕರು ಹಾಗು ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ – ಹುಬ್ಬಳ್ಳಿಯ ನಿರ್ದೇಶಕರು ನೇಮಕಗೊಂಡಿದ್ದಾರೆ. ಈ ಕೌನ್ಸಿಲ್ ರಾಜ್ಯದಲ್ಲಿ ಎಲ್ಲ ಅಲೈಡ್ ಹಾಗು ಪ್ಯಾರಾ ಮೆಡಿಕಲ್ ಕೋರ್ಸುಗಳ ಕಾಲೇಜುಗಳ ಉಸ್ತುವಾರಿ ನೋಡಿಕೊಳ್ಳಲಿದೆ


Spread the love

Exit mobile version