Home Mangalorean News Kannada News ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಚಿವ ಪ್ರಮೋದ್  ಮಧ್ವರಾಜ್ ಚಾಲನೆ

ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಸಚಿವ ಪ್ರಮೋದ್  ಮಧ್ವರಾಜ್ ಚಾಲನೆ

Spread the love

ರಾಜ್ಯ ಮಟ್ಟದ ಯುವ ಜನೋತ್ಸವಕ್ಕೆ ಸಚಿವ ಪ್ರಮೋದ್  ಮಧ್ವರಾಜ್ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿ.ಪಂ., ಯುವ ಸಬಲೀಕರಣ ಇಲಾಖೆ, ರಾಜ್ಯ ಮತ್ತು ಜಿಲ್ಲಾ ಯುವ ಸಂಘಗಳ ಒಕ್ಕೂಟದ ಆಶ್ರಯದಲ್ಲಿ  ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ   ರಾಜ್ಯ ಮಟ್ಟದ ಯುವ ಜನೋತ್ಸವ ಉದ್ಘಾಟನೆಗೊಂಡಿತು.

ರಾಜ್ಯ ಮಟ್ಟದ ಯುವ ಜನೋತ್ಸವವನ್ನು ರಾಜ್ಯ ಯುವಜನ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ದೀಪಬೆಳಗಿಸಿ ಉದ್ಘಾಟಿಸಿದರು.

 ಬಳಿಕ ಮಾತನಾಡಿದ ಪ್ರಮೋದ್ ಮಧ್ವರಾಜ್ ಅವರು ಹಿಂದೆ ಯುವ ಜನ ಮೇಳ, ಯುವಜನೋತ್ಸವವೆಂದರೆ ಊರಿನಲ್ಲಿ ಹಬ್ಬದ ವಾತಾವರಣವಿತ್ತು. ಈಗ ಯುವಕರು ವಾಟ್ಸಪ್‌, ಫೇಸ್‌ಬುಕ್‌ನಲ್ಲಿ ಮುಳುಗುತ್ತಿದ್ದಾರೆ. ವೇದಿಕೆ ಮೇಲೇರಿ ಪ್ರತಿಭೆಯನ್ನು ಪ್ರದರ್ಶಿಸುವ ಬದಲು ಕೋಣೆಯೊಳಗೆ ಸೇರುವ ಪ್ರವೃತ್ತಿ ಹೆಚ್ಚುತ್ತಿದೆ. ಈ ಸ್ಥಿತಿಯಿಂದ ಮತ್ತೆ ಹಿಂದಕ್ಕೆ ಬರಬೇಕು. ಜನರೊಂದಿಗೆ ಬೆರೆಯುವ ಮನೋಭಾವನೆಯನ್ನು ಬೆಳೆಸಿ ಭಾತೃತ್ವ, ಮಿತ್ರತ್ವ, ಒಗ್ಗಟ್ಟಿನ ಜೀವನಕ್ಕೆ ನಾಂದಿ ಹಾಡಬೇಕು

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವ ಜನೋತ್ಸವ, ಯುವ ಜನ ಮೇಳವಲ್ಲದೆ ಕೌಶಲ್ಯಾಭಿವೃದ್ಧಿಗೂ ಒತ್ತು ನೀಡುತ್ತಿದೆ. ಯುವ ಸಬಲೀಕರಣ ಇಲಾಖೆಗೆ ಪ್ರತ್ಯೇಕವಾಗಿ 15 ಕೋ.ರೂ. ಅನುದಾನವನ್ನು ಮುಖ್ಯಮಂತ್ರಿಗಳು ಕೌಶಲಾಭಿವೃದ್ಧಿಗಾಗಿ ಮೀಸಲಿಟ್ಟಿದ್ದಾರೆಂದು ಸಚಿವರು ತಿಳಿಸಿದರು.

 ಜಿ.ಪಂ. ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನರಸಿಂಹಮೂರ್ತಿ, ರಾಜ್ಯ ಒಕ್ಕೂಟದ ಅಧ್ಯಕ್ಷ ಬಾಲಾಜಿ, ಜಿಲ್ಲಾ ಸಂಘದ ಮನೋಹರ ಕುಂದರ್‌, ಎಸ್‌ಪಿ ಡಾ| ಸಂಜೀವ ಪಾಟೀಲ್‌, ಅಪರ ಜಿಲ್ಲಾಧಿಕಾರಿ ಅನುರಾಧಾ, ಅಜ್ಜರಕಾಡು ಮಹಿಳಾ ಕಾಲೇಜಿನ ಪ್ರಾಂಶುಪಾಲ ಜಗದೀಶ ರಾವ್‌, ಜಿ.ಪಂ. ಉಪಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಯುವಜನ ಸಬಲೀಕರಣ ಇಲಾಖೆ ಜಂಟಿ ನಿರ್ದೇಶಕ ಅಭಿಜಿನ್‌, ಉಪನಿರ್ದೇಶಕ ರಂಗಯ್ಯ ಮೊದಲಾದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಪ್ರಶಾಂತ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರ್ವಹಿಸಿ ಪ್ರಕಾಶ್‌ ಕ್ರಮಧಾರಿ ವಂದಿಸಿದರು.

 


Spread the love

Exit mobile version