ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ನೇಮಕ
ಬೆಂಗಳೂರು: ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಮಾಜಿ ಶಾಸಕಿ ಸೌಮ್ಯ ರೆಡ್ಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಜೊತೆಗೆ ಚಂಡಿಗಡ ಮತ್ತು ಅರುಣಾಚಲ ಪ್ರದೇಶ ಅಧ್ಯಕ್ಷರ ನೇಮಕವನ್ನು ಎಐಸಿಸಿ ಹೊರಡಿಸಿದೆ.
ಸೌಮ್ಯ ರೆಡ್ಡಿ ಒಂದು ಬಾರಿ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂ.ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿ, ತೇಜಸ್ವಿ ಸೂರ್ಯ ವಿರುದ್ಧ ಪರಾಜಿತಗೊಂಡಿದ್ದರು.