Home Mangalorean News Kannada News ರಾಜ್ಯ ಸರಕಾರದಿಂದ ಅಕ್ಕಿ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ: ಶೋಭಾ ಕರಂದ್ಲಾಜೆ

ರಾಜ್ಯ ಸರಕಾರದಿಂದ ಅಕ್ಕಿ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ: ಶೋಭಾ ಕರಂದ್ಲಾಜೆ

Spread the love

ರಾಜ್ಯ ಸರಕಾರದಿಂದ ಅಕ್ಕಿ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ: ಶೋಭಾ ಕರಂದ್ಲಾಜೆ

ಉಡುಪಿ: ರಾಜ್ಯದ ಕಾಂಗ್ರೆಸ್ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದೆ, ಚತ್ತೀಸ್‍ಗಢದಿಂದ ಅಕ್ಕಿ ಖರೀಧಿ ವ್ಯವಹಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ 2 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದ ಬಗ್ಗೆ ಮಾಹಿತಿಗಳಿವೆ ಎಂದು ಶೋಭಾ ಕರಂದ್ಲಾಜೆಯವರು ಹೇಳಿದರು.

ಅವರು ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಜರಗಿದ ಜಿಲ್ಲೆಯ ಬಿಜೆಪಿ ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಮೇ 18 ರಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಆರಂಭಗೊಂಡ ಬರ ಅಧ್ಯಯನ ಪ್ರವಾಸ ನಿರೀಕ್ಷೆಗೂ ಮೀರಿ ಯಶಸ್ಸು ಕಾಣುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಸಂಸದೆ ಶೋಭಾ ಕರಂದ್ಲಾಜೆಯವರು ಹೇಳಿದರು.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಜವಾಬ್ದಾರಿಯುತ ಪದಾಧಿಕಾರಿಗಳು, ಕಾರ್ಯಕರ್ತರು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಚುನಾವಣಾ ವರ್ಷದಲ್ಲಿ ಸಂಘಟನಾ ಪರ್ವ ಬಿರುಸಾಗಿ ನಡೆಯಬೇಕೆಂದು ಅವರು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ಮಾತನಾಡಿ ಯಡಿಯೂರಪ್ಪನವರ ಪ್ರವಾಸ ಉಡುಪಿ ಜಿಲ್ಲೆಗೆ ಜೂನ್ 23 ರಂದು ನಿಗಧಿಯಾಗಿದೆ. ಅವರ ಜಿಲ್ಲಾ ಪ್ರವಾಸವನ್ನು ಯಶಸ್ವಿಯಾಗಿ ನಿರ್ವಹಿಸುವ ಬಗ್ಗೆ ಮಾಹಿತಿ ನೀಡಿದರು.

ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ವಿಧಾನಸಭಾ ವಿಪಕ್ಷ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ, ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮಾಜಿ ಶಾಸಕರಾದ ಕೆ. ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ಯಶ್ ಪಾಲ್ ಎ ಸುವರ್ಣ, ಸಂದ್ಯಾ ರಮೇಶ, ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೋಶಾಧ್ಯಕ್ಷ ಬಿ. ರವಿ ಅಮೀನ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸಲೀಂ ಅಂಬಾಗಿಲು, ಬೋಳ ಸದಾಶಿವ ಶೆಟ್ಟಿ, ಕಿಶೋರ್ ಕುಮಾರ್, ವಕ್ತಾರ ಕಟಪಾಡಿ ಶಂಕರ ಪೂಜಾರಿ, ಗೀತಾಂಜಲಿ ಸುವರ್ಣ, ಶಿವಕುಮಾರ್, ಮಂಡಲ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಮೋರ್ಚಾಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮತ್ತಿತರ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.


Spread the love

Exit mobile version