ರಾಜ್ಯ ಸರಕಾರಿ ವೈದ್ಯಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 15ರಿಂದ ಹಂತಹಂತವಾಗಿ ಮುಷ್ಕರ

Spread the love

ರಾಜ್ಯ ಸರಕಾರಿ ವೈದ್ಯಾಧಿಕಾರಿಗಳಿಂದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆ. 15ರಿಂದ ಹಂತಹಂತವಾಗಿ ಮುಷ್ಕರ

ಉಡುಪಿ: ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದಿಂದ ವೇತನ ಪರಿಷ್ಕರಣೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸದಿದ್ದರೆ ಹಂತಹಂತವಾಗಿ ರಾಜ್ಯದಾದ್ಯಂತ ಮುಷ್ಕರ ನಡೆಸುವುದಾಗಿ ಉಡುಪಿ ಜಿಲ್ಲಾ ಸಂಘದ ಅಧ್ಯಕ್ಷ ಡಾ|ಹೆಚ್ ಪ್ರಕಾಶ್ ಕುಮಾರ್ ಶೆಟ್ಟಿ ತಿಳಿಸಿದರು.

ಅವರು ಸೋಮವಾರ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಸರ್ಕಾರಕ್ಕೆ 2020 ಜುಲೈ 22 ರಿಂದ ಹಲವು ಬಾರಿ ಕೇಂದ್ರ ಸರಕಾರದ ಆರೋಗ್ಯ ಯೋಜನೆ ಮಾದರಿಯಲ್ಲಿ ವೇತನ ಪರಿಷ್ಕರಣೆ ಹಾಗೂ ಇನ್ನಿತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಮನವಿಯನ್ನು ಸಲ್ಲಿಸಿದೆ

2020 ಅಗಸ್ಟ್ 15 ರೊಳಗೆ ಬೇಡಿಕೆಗಳು ಈಡೇರದೆ ಇದ್ದಲ್ಲಿ ಹಂತಹಂತವಾಗಿ ಮುಷ್ಕರದ ಮೊರೆ ಹೋಗುವುದಾಗಿ ಸರ್ಕಾರಕ್ಕೆ ತಿಳಿಸಲಾಗಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ 7ನೇ ವೇತನ ಆಯೋಗದ ವೇತನ ಶ್ರೇಣಿ ನೀಡಲಾಗಿದೆ ಆದರೆ Covid – 19 ತುರ್ತು ಸ್ಥಿತಿ ಹಿನ್ನೆಲೆಯಲ್ಲಿ ಹಗಲಿರುಳು ದುಡಿಯುತ್ತಿರುವ ಸರ್ಕಾರಿ ವೈದ್ಯಾಧಿಕಾರಿಗಳ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೇ ಇರುವ ಕಾರಣ ಸಪ್ಟೆಂಬರ್ 15 ರಿಂದ 20 ರ ವರೆಗೆ ಆನ್ಲೈನ್ ಸಹಿತ ಎಲ್ಲಾ ಸರ್ಕಾರಿ ಸಭೆಗಳಿಂದ ದೂರ ಉಳಿಯುವುದು ಹಾಗೂ Covid – 19 ಸಹಿತ ಎಲ್ಲಾ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ವರದಿಗಳನ್ನು ಸರ್ಕಾರಕ್ಕೆ ನೀಡದೇ ಇರಲು ನಿರ್ಧರಿಸಲಾಗಿದೆ. ಆದರೆ ಸಾರ್ವಜನಿಕ ಹಾಗೂ ಬಡ ರೋಗಿಗಳ ಹಿತದೃಷ್ಟಿಯಿಂದ ಕರ್ತವ್ಯಕ್ಕೆ ಹಾಜರಾಗಿ ಆರೋಗ್ಯ ಸೇವೆಯನ್ನು ಮುಂದುವರಿಸಲಾಗುವುದು ಎಂದರು.

ಈ ಒಂದು ವಾರದ ಅವಧಿಯಲ್ಲಿ ಸರ್ಕಾರ ನಮ್ಮ ನ್ಯಾಯಯುತವಾದ ಬೇಡಿಕೆಗಳು ಸ್ಪಂದಿಸದೇ ಇದ್ದಲ್ಲಿ, ಜುಲೈ 21 ರಿಂದ ತುರ್ತು ಸೇವೆಯನ್ನು ಹೊರತು ಪಡಿಸಿ ಉಳಿದೆಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಹಾಗೂ ಬೆಂಗಳೂರು ಚಲೋ ಜಾಥಾ ವನ್ನು ಹಮ್ಮಿಕೊಂಡು ಮುಂದಿನ ನಡೆಯನ್ನು ರಾಜ್ಯಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಂಘದ ಕಾರ್ಯದರ್ಶಿ ಡಾ|ನರಸಿಂಹ ನಾಯಕ್, ಉಪಾಧ್ಯಕ್ಷರಾದ ಡಾ|ಉಮೇಶ್ ನಾಯಕ್, ಸಂಘಟನಾ ಕಾರ್ಯದರ್ಶಿ ಡಾ|ಗೋಪಾಲ್ ಎಸ್ ಜಿ, ಜಂಟಿ ಕಾರ್ಯದರ್ಶಿ ಡಾ|ಪ್ರತಾಪ್ ಕೆ. ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ|ರಂಜಿತ್ ಉಪಸ್ಥಿತರಿದ್ದರು.


Spread the love