ಮಂಗಳೂರು: ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಕೇಂದ್ರ ಕಾನೂನು ಸಚಿವ ಡಿ.ವಿ. ಸದಾನಂದ ಗೌಡ ಸೂಚಿಸಿದ್ದಾರೆ.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆ ಬಗ್ಗೆ ಎ. 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿಯೋಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದಾಗ ಅವರ ಬಳಿ ಯೋಜನೆಯ ವಿಸ್ತೃತ ವರದಿ ಇರಲಿಲ್ಲ. ಆದರೆ ಮೇಕೆದಾಟು ಯೋಜನೆ ಬಗ್ಗೆ ಸರ್ಕಾರ ಡಿಪಿಆರ್ ಸಿದ್ದ ಪಡಿಸಬೇಕಾಗಿದ್ದು ಕೂಡಲೇ ಸಿದ್ಧಪಡಿಸ ಬೇಕಾಗಿ ಹೇಳಿದ್ದಾರೆ.
ರಾಜ್ಯದ ವ್ಯಾಪ್ತಿಯಲ್ಲಿ ಮೇಕೆದಾಟು ಇರುವುದರಿಂದ ಈ ಬ್ಗಗೆ ತಮಿಳುನಾಡು ಸರ್ಕಾರ ತಗಾದೆ ತೆಗೆಯುವುದು ಸರಿಯಲ್ಲ. ಇಲ್ಲಿನ ಯೋಜನೆಯಿಂದ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಸಾಧ್ಯವಾಗಬಹುದು. ಸುಮಾರು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯೂ ಮಾಡಬಹುದು ಎಂದರು.