ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ಮದ್ಯ ಮಾರಾಟ ನಿಷೇಧ
ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಭೂಮಿಪೂಜೆಯು ಆ.5ರಂದು ನೆರವೇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು ರಾತ್ರಿ 8ರಿಂದ ಆ.6ರಂದು ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ ಜಗದೀಶ್ ಆದೇಶ ನೀಡಿದ್ದಾರೆ.
ಅಗಸ್ಟ್ 5ರಂದು ಉತ್ತರ ಪ್ರದೇಶ ರಾಜ್ಯದಲ್ಲಿ ಶ್ರೀ ರಾಮ ಜನ್ಮಭೂಮಿ ಯಾದ ಅಯೋಧ್ಯ ಎಂಬಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲಿರುವ ಸಮಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಸೂಕ್ಷ್ಮ ಸ್ಥಳಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ಯವರನ್ನು ನಿಯೋಜನೆ ಮಾಡಲಾಗಿದೆ,ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ಸೂಕ್ಷ್ಮ ಪ್ರದೇಶ ಗಳಿದ್ದು,ನಾಳೆ ದಿನ ವಿವಿಧ ಸಂಘಟನೆಗಳು ಮೆರವಣಿಗೆ/ಪ್ರತಿಭಟನೆಗಳು/ಕಾರ್ಯಕ್ರಮಗಳು ನಡೆಸಿದ್ದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು ರಾತ್ರಿ 8ರಿಂದ ಆ.6ರಂದು ಬೆಳಗ್ಗೆ 6 ಗಂಟೆವರೆಗೆ ಮುಂಜಾಗ್ರತಾ ಕ್ರಮವಾಗಿ ಶಾಂತಿ ,ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಠಿಯಿಂದ ಡೈ ಡೇ’ (ಮದ್ಯಮುಕ್ತ ದಿನವನ್ನಾಗಿ ಮಾಡುವರೇ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಡಿರುವ ವಿನಂತಿ ಮೇರೆಗೆ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1961 ಕಲಂ 21 ರನ್ವಯ ಅಧಿಕಾರವನ್ನು ಚಲಾಯಿಸಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ಆ.4ರಂದು ರಾತ್ರಿ 8ರಿಂದ ಆ.6ರಂದು ಬೆಳಗ್ಗೆ 6 ಗಂಟೆವರೆಗೆ ಅಬಕಾರಿ ಸನ್ನದು ಗಳನ್ನು ಮುಚ್ಚಲು ಆದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಲಾದ ದಿನಾಂಕದಂದು ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಒಣ ದಿನ (Dry Day) ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.