Home Mangalorean News Kannada News ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ನಿಷೇಧಾಜ್ಞೆ

ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ನಿಷೇಧಾಜ್ಞೆ

Spread the love

ರಾಮಮಂದಿರ ಭೂಮಿಪೂಜೆ: ಉಡುಪಿ ಜಿಲ್ಲೆಯಾದ್ಯಂತ ಆ.4 ರಿಂದ 6 ರ ವರೆಗೆ ನಿಷೇಧಾಜ್ಞೆ

ಉಡುಪಿ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ಭೂಮಿಪೂಜೆಯು ಆ.5ರಂದು ನೆರವೇರಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಆ.4ರಂದು ರಾತ್ರಿ 8ರಿಂದ ಆ.6ರಂದು ಬೆಳಗ್ಗೆ 6 ಗಂಟೆವರೆಗೆ ಸಿಆರ್ಪಿಸಿಯ ಕಲಂ 144 ಸೆಕ್ಷನ್ನಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಜಿ ಜಗದೀಶ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಷೆ ಜಾರಿಯಲ್ಲಿರುವಾಗ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು. ಶಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಬಂದೂಕು, ಚಾಕು, ಕೋಲು, ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ಮಾರಕಾಸ್ತ್ರಗಳನ್ನು ಸಾಗಿಸು ವಂತಿಲ್ಲ. ಪಟಾಕಿ ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಸಾಗಿಸುವಂತಿಲ್ಲ ಎಂದು ಹೇಳಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದನ್ನು , ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ, 8) ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದು ಅಪರಾಧವನ್ನು ಮಾಡಲು ಮಾಡುವುದು, ಮತ್ತು ಚಿತ್ರಗಳನ್ನು , ಸಂಶಯಗಳನ್ನು ಭಿತ್ತಿ ಪತ್ರಗಳನ್ನು ಅಥವಾ ಇತರ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.
ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ, ಧರಣಿ, ಮುಷ್ಕರ, ಮುತ್ತಿಗೆ, ಬೈಕ್ ರ್ಯಾಲಿ, ಸಮಾರಂಭ ನಡೆಸುವಂತಿಲ್ಲ. ಕಲ್ಲು ಎಸೆಯುವಂತಿಲ್ಲ. ವ್ಯಕ್ತಿಯಗಳ ಅಥವಾ ಅವರ ಶವಗಳ ಅಥವಾ ಆಕೃತಿ-ಪ್ರತಿಕೃತಿಗಳ ಪ್ರದರ್ಶನ ನಿಷಿದ್ಧ. ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟು ಮಾಡುವುದು, ರಾಜ್ಯದ ಭದ್ರತೆ ಕುಗ್ಗಿಸುವುದು, ಅಪರಾಧ ಕೃತ್ಯಕ್ಕೆ ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಹಾಡು, ಸಂಗೀತ, ಆವೇಶಭರಿತ ಭಾಷಣ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


Spread the love

Exit mobile version