Home Mangalorean News Kannada News ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವೀಡಿಯೊ ಪತ್ತೆ: ಪ್ರಕರಣ ದಾಖಲು

ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವೀಡಿಯೊ ಪತ್ತೆ: ಪ್ರಕರಣ ದಾಖಲು

Spread the love

ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವೀಡಿಯೊ ಪತ್ತೆ: ಪ್ರಕರಣ ದಾಖಲು

ಮಂಗಳೂರು: ನಗರದ ಬಿಜೈ ಕೆಎಸ್ಸಾರ್ಟಿಸಿ ಬಳಿಯ ಯುನಿಸೆಕ್ಸ್ ಸೆಲೂನ್ ಗೆ ನುಗ್ಗಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ರಾಮಸೇನೆಯ ಮುಖಂಡ ಪ್ರಸಾದ್ ಅತ್ತಾವರನ ಮೊಬೈಲ್ ನಲ್ಲಿ ಪ್ರಾಣಿಬಲಿಯ ವಿಡಿಯೊಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಕ್ತಿ ದೇವತೆಯ ಮುಂದೆ ಪ್ರಾಣಿಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬವರ ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭಿಸಿದೆ. ಆ ಇಬ್ಬರಿಗೆ ಶಕ್ತಿ ತುಂಬುವುದಕ್ಕೆ ಪ್ರಾಣಿಬಲಿ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರು ಹಿರಿಯ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯರ ಗಮನಕ್ಕೆ ತಂದಿದ್ದಾರೆ. ಅದರಂತೆ ಕದ್ರಿ ಪೊಲೀಸ್ ಇನ್ ಸ್ಪೆಕ್ಟರ್ ಸೋಮಶೇಖರ್ ನೀಡಿರುವ ದೂರಿನಂತೆ ಬರ್ಕೆ ಠಾಣೆಯಲ್ಲಿ ಗುರುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಪ್ರಾಣಿಬಲಿ ಪೂಜೆ ಮಾಡಲು ಪ್ರಸಾದ್ ಅತ್ತಾವರನು ಅನಂತ ಭಟ್ ಗೆ ಹಣ ವರ್ಗಾವಣೆ ಮಾಡಿದ್ದಾನೆ ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಮತ್ತು ಅನಂತ ಭಟ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.

*ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ವಾರದ ಹಿಂದೆ ಬಂಧಿಸಲ್ಪಟ್ಟ ಪ್ರಸಾದ್ ಅತ್ತಾವರನ ಮೊಬೈಲ್ ಪರಿಶೀಲನೆ ಮಾಡಿದಾಗ ಹಲವಿ ವಿಡಿಯೋಗಳು ಕಂಡು ಬಂದಿವೆ. ಆ ಪೈಕಿ ದೇವಸ್ಥಾನದಲ್ಲಿ ಐದು ಕುರಿಗಳನ್ನು ಬಲಿ ಕೊಡವ ದೃಶ್ಯ ಇತ್ತು. ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಬಲ ತುಂಬಲು ಬಲಿ ಕೊಟ್ಟಿದ್ದಾರೆ ಎಂಬ ಮಾಹಿತಿ ಇದೆ ಎಂದರು.

ಅನಂತ ಭಟ್ ಯಾರು ಎಂಬುದರ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಬಲಿ ಎಲ್ಲಿ ಕೊಟ್ಟಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಅವರಿಗಾಗಿ ಬಲಿ ಕೊಡಲಾಗಿದೆ ಎನ್ನಲಾಗಿದೆ. ಹಾಗಾಗಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದೇವೆ.


Spread the love

Exit mobile version