ರಾಮ ಮಂದಿರ ಪ್ರತಿಷ್ಠಾಪನೆ: ಉಡುಪಿಯಲ್ಲಿ ಸೂಕ್ತ ಬಂದೋಬಸ್ತ್ – ಎಸ್ಪಿ ಡಾ. ಅರುಣ್ ಕೆ

Spread the love

ರಾಮ ಮಂದಿರ ಪ್ರತಿಷ್ಠಾಪನೆ: ಉಡುಪಿಯಲ್ಲಿ ಸೂಕ್ತ ಬಂದೋಬಸ್ತ್ – ಎಸ್ಪಿ ಡಾ. ಅರುಣ್ ಕೆ

ಉಡುಪಿ: ಅಯೋಧ್ಯೆಯ ರಾಮಮಂದಿರಲ್ಲಿ ನಾಳೆ (ಜನವರಿ 22) ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಸಮಾರಂಭ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಬಂದೋಬಸ್ತ್ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಇಲಾಖೆ ಸೂಚನೆ ನೀಡಿದ್ದಾರೆ.

ಹೀಗಾಗಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದ್ದು ಉಡುಪಿ ಜಿಲ್ಲೆಯಲ್ಲಿ ಕೂಡ ಯಾವುದೆ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.

ಆಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನಲೆ ಜಿಲ್ಲೆಯಾದ್ಯಂತ ರಾಮಮಂದಿರ ಉದ್ಘಾಟನೆ ಸಂಭ್ರಮ ಜೋರಾಗಿದೆ. ಅಲ್ಲಲ್ಲಿ ಕೇಸರಿ ಧ್ವಜ, ರಾಮನ ಫ್ಲೆಕ್ಸ್ ಹಾಕಿ ಭಕ್ತರು ಸಂಭ್ರಮಿಸುತ್ತಿದ್ದಾರೆ. ಫ್ಲೆಕ್ಸ್ ಬಂಟಿಂಗ್ಸ್ ಗಳ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದು ಜಿಲ್ಲೆಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಇಬ್ಬರು ಹೆಚ್ಚುವರಿ ಎಸ್ಪಿ, 3 ಡಿವೈಎಸ್ಪಿ, 10 ಇನ್ಸ್ ಪೆಕ್ಟರ್, 47 ಸಬ್ ಇನ್ಸ್ ಪೆಕ್ಟರ್, 670 ಪೊಲೀಸ್ ಸಿಬಂದಿ ಜೊತೆಗೆ 100 ಮಂದಿ ಹೋಮ್ ಗಾರ್ಡ್ಸ್, 3 ಕೆಎಸ್ ಆರ್ ಪಿ ತುಕಡಿ, 8 ಡಿಎಆರ್ ತಂಡಗಳು ಬಂದೋಬಸ್ತ್ ಕಾರ್ಯದಲ್ಲಿ ಸಹಕರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ತಿಳಿಸಿದ್ದಾರೆ.


Spread the love