Home Mangalorean News Kannada News ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ 

ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ 

Spread the love

ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ 

ಮಂಗಳೂರು : ಡಾ.ಪಿ ದಯಾನಂದ ಪೈ-ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ಆಗಸ್ಟ್ 27 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನೆ ಮತ್ತು ಮಾಹಿತಿ ಮತ್ತು ಅಭಿವಿನ್ಯಾಸ ಕಾರ್ಯಾಗಾರವನ್ನು ಮಂಗಳೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ದಯಾನಂದ ನಾಯ್ಕ್ ಇವರು ನೆರೆವೇರಿಸಿದರು.

ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಮತ್ತು ಸಮಾಜ ಮುಖಿ ಕಾರ್ಯದಲ್ಲಿ ತಮ್ಮನ್ನು ಹೇಗೆ ತೊಡಗಿಸಿಕೊಳ್ಳಬೇಕೆಂದು ತಮ್ಮ ಅನುಭವದ ಮೂಲಕ ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ್ ಹೆಬ್ಬಾರ್ ಸಿ ವಹಿಸಿದ್ದು, ಕಾಲೇಜಿನ ಮುಖ್ಯ ಶೈಕ್ಷಣಿಕ ಸಲಹೆಗಾರರಾದ ಡಾ. ಶಿವರಾಮ್ ಪಿ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಜಯಕರ ಭಂಡಾರಿ ಎಂ. ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದರು. ಎನ್.ಎಸ್.ಎಸ್‍ನ ಯೋಜನಾಧಿಕಾರಿಗಳಾದ ಪ್ರೊ.ತ್ರಿಶಾಂತ್ ಕುಮಾರ್, ಪ್ರೊ.ಅರುಣಾ ಕುಮಾರಿ ಹಾಗೂ ಸಂಚಲಕರಾಗಿ ಪ್ರೊ.ಶೇಷಪ್ಪ.ಕೆ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಎನ್.ಎಸ್.ಎಸ್‍ನ ವಿದ್ಯಾರ್ಥಿ ಕಾರ್ಯದರ್ಶಿ ಕು.ಕವಿತಾ ಹಾಗೂ ವಂದನಾಪರ್ಣೆಯನ್ನು ಕು.ಕಾವೇರಿ ನೆರೆವೇರಿಸಿದರು.


Spread the love

Exit mobile version