ರಾಹುಲ್ ಗಾಂಧಿ , ಪ್ರಿಯಾಂಕ ಗಾಂಧಿ ಬಂಧನ ಉಡುಪಿ ಜಿಲ್ಲಾ ಕಾಂಗ್ರೆಸ್ ಖಂಡನೆ
ಉಡುಪಿ: ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರ ಭೇಟಿಗಾಗಿ ಗುರುವಾರ ಹತ್ರಾಸ್ ಗೆ ಹೊರಟಿದ್ದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯನ್ನು ತಡೆದು ವಶಕ್ಕೆ ಪಡೆದ ಉತ್ತರ ಪ್ರದೇಶ ಪೊಲೀಸರ ನಡೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ
ಉತ್ತರ ಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಸಂತೃಸ್ತ ಯುವತಿಯ ಕುಟುಂಬಸ್ಥರನ್ನು ಭೇಟಿ ಮಾಡಲು ಉತ್ತರ ಪ್ರದೇಶದ ಹತ್ರಾಸ್ಗೆ ತೆರಳುತ್ತಿದ್ದ ನಿಕಟಪೂರ್ವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರ ಕಾರನ್ನು ತಡೆದು ನಿಲ್ಲಿಸಿದಾಗ ಕಾಲ್ನಡಿಗೆಯಲ್ಲಿಯೇ 142 ಕಿ.ಮೀ. ದೂರವನ್ನು ಕ್ರಮಿಸಲು ನಿಶ್ಚಯಿಸಿದಾಗ ಪೋಲಿಸರು ತಡೆದು ದೈಹಿಕ ಹಲ್ಲೆ ನಡೆಸಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಸರಕಾರದ ಈ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಖಂಡಿಸಿದ್ದಾರೆ.