ರೆಡ್ ಅಲರ್ಟ್ ಹಿನ್ನಲೆ: ಜು.18ರಂದು ದಕ ಜಿಲ್ಲೆಯ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ರೆಡ್ ಅಲರ್ಟ್ ಹಿನ್ನಲೆ: ಜು.18ರಂದು ದಕ ಜಿಲ್ಲೆಯ ಐದು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 18ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯ್ಲಲಿ ಮುಂಜಾಗೃತಾ ಕೃಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಉಳಿದ ತಾಲೂಕುಗಳಾದ ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿಯ ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love