ರೇಶನ್ ಕಾರ್ಡ್: ಇ-ಕೆವೈಸಿ ಮಾಡಲು ಕೊನೆಯ ಅವಕಾಶ

Spread the love

ರೇಶನ್ ಕಾರ್ಡ್: ಇ-ಕೆವೈಸಿ ಮಾಡಲು ಕೊನೆಯ ಅವಕಾಶ

ಮಂಗಳೂರು: ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ಮಾಡಲು ಕೊನೆಯ ಅವಕಾಶ ಕಲ್ಪಿಸಲಾಗಿದೆ.

ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುವುದು.ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರು ತ್ತದೆ. ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಪಡಿತರ ಚೀಟಿಗಳಲ್ಲಿನ ಕುಟುಂಬದ ಮುಖ್ಯಸ್ಥ, ಸಂಬಂಧ, ಲಿಂಗ, ಜಾತಿ, ಎಲ್‌ಪಿಜಿ ವಿವರ, ಮೊಬೈಲ್ ಸಂಖ್ಯೆ ತುರ್ತಾಗಿ ಸಂಗ್ರಹಿಸಬೇಕು. ಆದುದರಿಂದ ದ.ಕ. ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್‌ಪಿಜಿ ದಾಖಲೆ, ಜಾತಿ ಪ್ರಮಾಣ ಪತ್ರ (ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಲು ತಿಳಿಸಿದೆ.

ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ ಅಂತ್ಯೋದಯ ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಾಗಿದೆ. ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಲು ಕ್ರಮ ವಹಿಸಲಾಗಿರುತ್ತದೆ.

ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ವನ್, ಗ್ರಾಮ ವನ್‌ಗಳಲ್ಲಿ ಕೂಡಾ ಮಾಡಲು ಅವಕಾಶರುತ್ತದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕು ತಹಶೀಲ್ದಾರರು ಮತ್ತು ಸಹಾಯಕ ನಿರ್ದೇಶಕರು, ಅನೌಪಚಾರಿಕ ಪಡಿತರ ಪ್ರದೇಶ ಇವರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments