Home Mangalorean News Kannada News ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Spread the love

ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ರವರಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿಗೆ ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ರವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು.

ಉಡುಪಿ ಜಿಲ್ಲೆಯ ಜನತೆಯ ಬಹುದಿನದ ಬೇಡಿಕೆಯಾದ ಮಡಗಾಂವ್ ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಸ್ಲೀಪರ್ ಕ್ಲಾಸಿನೊಂದಿಗೆ ಬೆಂಗಳೂರಿಗೆ ಹಾಗೂ ಮುಂಬೈಗೆ ವಿಸ್ತರಣೆ, ಅಂಬಾಗಿಲು ಪೆರಂಪಳ್ಳಿ ಮತ್ತು ಚಾಂತಾರು ರೈಲ್ವೆ ಮೇಲ್ಸೇತುವೆಯನ್ನು ರಸ್ತೆಯ ಅಗಲೀಕರಣಕ್ಕೆ ಪೂರಕವಾಗಿ ಮೇಲ್ಸೇತುವೆಗಳ ಅಗಲೀಕರಣ, ಇಂದ್ರಾಳಿ ರೈಲ್ವೇ ಸೇತುವೆ ಬಳಿ ರಸ್ತೆ ದಾಟುವ ಪಾದಚಾರಿಗಳಿಗಾಗಿ ಫುಟ್ ಬ್ರಿಡ್ಜ್ ನಿರ್ಮಾಣ, ಬೆಂಗಳೂರು ಕಾರವಾರ ರೈಲಿನ ಬೆಂಗಳೂರಿನಿಂದ ಹೊರಡುವ ಸಮಯವನ್ನು ರಾತ್ರಿ 8.30ಕ್ಕೆ ನಿಗದಿ ಮಾಡಿ ಸಂಚಾರ ಅವಧಿಯನ್ನು ಕಡಿತಗೊಳಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು, ಕರಾವಳಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಶಿರಾಡಿ ಘಾಟ್ ಅಗಲೀಕರಣ ಸಂದರ್ಭದಲ್ಲಿ ಮೆಟ್ರೋ ಮಾದರಿಯಲ್ಲಿ ಹೊಸ ರೈಲ್ವೇ ಹಳಿಗಳ ಅಳವಡಿಕೆಗೆ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಮನವಿ ಮಾಡಿದರು.

ಅಮೃತ ಯೋಜನೆಯಡಿ ಆಯ್ಕೆಯಾದ ಉಡುಪಿ ಇಂದ್ರಾಳಿ ರೈಲ್ವೇ ನಿಲ್ದಾಣವನ್ನು ಶೀಘ್ರವಾಗಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕ್ರಮ, ಶಿಕ್ಷಣ, ಧಾರ್ಮಿಕ, ಪ್ರವಾಸೋದ್ಯಮ, ಮೀನುಗಾರಿಕೆ ಕಾರಣಗಳಿಗಾಗಿ ದಿನಂಪ್ರತಿ ಸಾವಿರಾರು ಪ್ರಯಾಣಿಕರು ಅವಲಂಬಿಸಿರುವ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತೆಗೆ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಸಚಿವ ಸೋಮಣ್ಣ ಉಡುಪಿ ಜಿಲ್ಲೆಯ ರೈಲ್ವೇ ಸಂಬಂಧಿಸಿದ ಬೇಡಿಕೆಗಳ ಮನವಿಯನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಇಂದ್ರಾಳಿ ರೈಲ್ವೇ ನಿಲ್ದಾಣದ ಮೂಲ ಸೌಕರ್ಯ ಅಭಿವೃಧ್ದಿಗೆ ಶೀಘ್ರ ಕ್ರಮ ವಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಾಪು ಶಾಸಕರಾದ  ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್, ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಮಹಿಳಾ ಮೋರ್ಚಾದ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ವೀಣಾ ಶೆಟ್ಟಿ, ಪ್ರಮುಖರಾದ ಜಯಕರ ಸನಿಲ್, ಆನಂದ ಸುವರ್ಣ, ಸಂತೋಷ್ ಆಚಾರ್ಯ, ಗುರುರಾಜ್ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version