ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ!

Spread the love

ಲಂಚ ಪಡೆಯುತ್ತಿದ್ದ ಅರಣ್ಯಾಧಿಕಾರಿ ಲೋಕಾಯುಕ್ತ ಬಲೆಗೆ!

ಕುಂದಾಪುರ: ಖಾಸಗಿ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಅನುಮತಿಗಾಗಿ ಲಂಚದ ಬೇಡಿಕೆಯಿಟ್ಟ ಅರಣ್ಯಾಧಿಕಾರಿಯೋರ್ವ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರಿನಲ್ಲಿ ವರದಿಯಾಗಿದೆ‌‌

ಬೈಂದೂರು ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾದರೆ, ಅರಣ್ಯ ವೀಕ್ಷಕ ವಿನಾಯಕ ತಪ್ಪಿಸಿಕೊಂಡಿದ್ದಾನೆ.

ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವವರ ಖಾಸಗಿ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡುವ ಈ ಬಗ್ಗೆ ಅರ್ಜಿ ನೀಡಿದ್ದರು. ಈ ಸಂದರ್ಭ ಆರೋಪಿಗಳು ಪರವಾನಿಗೆ ನೀಡಲು ನಾಲ್ಕು ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿ ಬಂಗಾರಪ್ಪನನ್ನು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದಿದ್ದಾರೆ.

ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ. ಎ ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ. ಸಿ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಮಂಜುನಾಥ್ ಇವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಮಲ್ಲಿಕಾ, ಪುಷ್ಪಾವತಿ, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಹಾಗೂ ಸುಧೀರ್ ಇವರು ಕಾರ್ಯಾಚರಣೆಯಲ್ಲಿದ್ದರು.


Spread the love
Subscribe
Notify of

0 Comments
Inline Feedbacks
View all comments