Spread the love
ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್‌ನಲ್ಲಿ ಗುರುವಾರ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರಿನ್ವಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
Spread the love