Home Mangalorean News Kannada News ಲಾಕ್ ಡೌನ್ ಸಡಿಲಿಕೆ; ಕೇವಲ 4 ಗಂಟೆಗಳಲ್ಲಿ ಉಡುಪಿಯಲ್ಲಿ ರೂ 1.5 ಕೋಟಿ ಮೌಲ್ಯದ ಮದ್ಯ...

ಲಾಕ್ ಡೌನ್ ಸಡಿಲಿಕೆ; ಕೇವಲ 4 ಗಂಟೆಗಳಲ್ಲಿ ಉಡುಪಿಯಲ್ಲಿ ರೂ 1.5 ಕೋಟಿ ಮೌಲ್ಯದ ಮದ್ಯ ಮಾರಾಟ!

Spread the love

ಲಾಕ್ ಡೌನ್ ಸಡಿಲಿಕೆ; ಕೇವಲ 4 ಗಂಟೆಗಳಲ್ಲಿ ಉಡುಪಿಯಲ್ಲಿ ರೂ 1.5 ಕೋಟಿ ಮೌಲ್ಯದ ಮದ್ಯ ಮಾರಾಟ!

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯ ಪರಿಣಾಮ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದು ಕೇವಲ 4 ಗಂಟೆಗಳ ಅವಧಿಯಲ್ಲಿ ಸುಮಾರು 1.5 ಕೋಟಿ ಮೌಲ್ಯದ ಮದ್ಯ ಮಾರಾಟ ಆಗಿರುವ ಅಂದಾಜಿದೆ ಎಂದು ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ 103 ವೈನ್ ಸ್ಟೋರ್ ಗಳಿದ್ದು ಈ ಪೈಕಿ 89 ವೈನ್ ಶಾಪ್ಸ್ , 14 ಎಂಎಸ್ಐಎಲ್ ಮಳಿಗೆಗಳಲ್ಲಿ ಮಾರಾಟ ನಡೆದಿದೆ. ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ರೂ 1.25 ಮೌಲ್ಯದ ಒಟ್ಟು 41927 ಲೀಟರ್ ಲಿಕ್ಕರ್ ಹಾಗೂ ರೂ 25 ಲಕ್ಷ ಮೌಲ್ಯದ 15872 ಲೀಟರ್ ಬಿಯರ್ ಮಾರಾಟವಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯ ಸರಕಾರ ಬೆಳಿಗ್ಗೆ 9 ರಿಂದ ರಾತ್ರಿ 7 ರ ವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡದರೆ ಉಡುಪಿಯಲ್ಲಿ ಮಾತ್ರ ಸೋಮವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರವರೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಅದರ ಅವಕಾಶವನ್ನು ಎಣ್ಣೆ ಪ್ರಿಯರು ಉತ್ತಮವಾಗಿ ಸದುಪಯೋಗಪಡಿಸಿಕೊಂಡು ಅಬಕಾರಿ ಇಲಾಖೆಗೆ ಧಾರಾಳವಾಗಿ 1.5 ಕೋಟಿ ಆದಾಯ ತಂದುಕೊಟ್ಟಿದ್ದಾರೆ.


Spread the love

Exit mobile version