ಲಾಕ್ ಡೌನ್ ಹಿನ್ನೆಲೆ; ಪೊಲೀಸರಿಂದ ಉಡುಪಿ ಜಿಲ್ಲೆಯಾದ್ಯಂತ 32 ಚೆಕ್ ಪೋಸ್ಟ್
ಉಡುಪಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಗಡಿ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ಸ್ಥಾಪಿಸಲಾಗಿರುವ ಒಟ್ಟು 32 ಚೆಕ್ ಪೋಸ್ಟ್ಗಳ ಮೂಲಕ ಅನವಶ್ಯಕವಾಗಿ ಸಂಚರಿಸುವ ವಾಹನಗಳನ್ನು ತಪಾ ಸಣೆ ಮಾಡುವ ಕಾರ್ಯ ಪೊಲೀಸರಿಂದ ನಡೆಯುತ್ತಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ಒಟ್ಟು ಎಂಟು ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಅದೇ ರೀತಿ ಜಿಲ್ಲೆಯ ಒಳಗೆ 24 ಚೆಕ್ ಪೋಸ್ಟ್ಗಳನ್ನು ನಿರ್ಮಿಸಲಾಗಿದೆ. ಈ ಚೆಕ್ ಪೋಸ್ಟ್ಗಳು ರಾತ್ರಿಹಗಲು ಕಾರ್ಯಾಚರಿಸುತ್ತಿದೆ.
ಅದೇ ರೀತಿ ಕೆಲವು ಕಡೆಗಳಲ್ಲಿ ಬೆಳಗ್ಗೆ 11ರ ಬಳಿಕ ಅನಾವಶ್ಯಕವಾಗಿ ತಿರುಗಾಡುವ ವಾಹನಗಳ ವಿರುದ್ಧ ಕ್ರಮ ಜರಗಿಸುವ ನಿಟ್ಟಿನಲ್ಲಿ ಕೆಲವು ಕಡೆ ತಾತ್ಕಾಲಿಕ ಚೆಕ್ ಪೋಸ್ಟ್ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ತಿಳಿಸಿದ್ದಾರೆ.