ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು ಇಬ್ಬರಿಗೆ ಗಾಯ

Spread the love

ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು ಇಬ್ಬರಿಗೆ ಗಾಯ

ಮಂಗಳೂರು: ಲಾರಿ ಹಿಂಬದಿಗೆ ಇನ್ನೊವಾ ಕಾರೋಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಮಂಗಳೂರು ಕಡೆಯಿಂದ ಹೊಸಪೇಟೆ ಕಡೆಗೆ ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಮೂಲ್ಕಿ ರಮಾನಾಥ ಪೈ ಎಂಬುವವರಿಗೆ ಸೇರಿದ ಕಾರು ಡಿಕ್ಕಿ ಹೊಡೆದಿದ್ದು, ಕಾರು ಚಾಲಕ ಕೊಕ್ಕರಕಲ್ ನಿವಾಸಿ ರೋಹನ್ ಹಾಗೂ ಅಂಗರಗುಡ್ಡೆ ನಿವಾಸಿ ರಮೇಶ್ ದೇವಾಡಿಗ ಎಂಬವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಕಾರು ಚಾಲಕನ ಅಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣವಾಗಿದ್ದು ಅಪಘಾತದ ರಭಸಕ್ಕೆ ಇನ್ನೋವಾ ಕಾರಿನ ಎದುರು ಭಾಗ ಸಂಪೂರ್ಣ ನಜ್ಜುಗುಜ್ಜು ಆಗಿದೆ.

ಅಪಘಾತದ ಬಳಿಕ ಸ್ವಲ್ಪ ಹೊತ್ತಿನಲ್ಲಿ ಕಾರಿನಲ್ಲಿದ್ದ ಪರ್ಸ್ ಹಾಗೂ ಎಟಿಎಂ ಕಾರ್ಡ್ ಕಳವು ಆಗಿದ್ದು ಸಹಾಯ ಮಾಡುವ ನೆಪದಲ್ಲಿ ಕಾರಿನಲ್ಲಿದ್ದ ಪರ್ಸ್ ಮತ್ತು ಎಟಿಎಂ ಕಾರ್ಡ್ ಕಳವು ಮಾಡಲಾಗಿದೆ.

ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love