ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್
ದೆಹಲಿ: ಲೋಕಸಭೆ ಚುನಾವಣೆ ಸಮೀಪಿರುತ್ತಿರುವ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜೀನಾಮೆ ಮಾಡಿದ್ದಾರೆ.
ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಸದ್ಯ ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ.
ಗೋಯಲ್ ಅವರ ರಾಜೀನಾಮೆಯಿಂದಾಗಿ ಇದೀಗ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ. ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವರದಿ ಆಗಿದೆ.