ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ
ಕೋಟ: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಕೊಡಮಾಡುವ `ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’ ಪ್ರದಾನ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಜು.24 ರಂದು ರಘುರಾಮ ಶೆಟ್ಟರ ವಡ್ಡರ್ಸೆಯ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯ ಅತಿಥಿಗಳು ಜತೆಯಾಗಿ ಆಮಂತ್ರಣ ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿ ಉಡುಪಿ ಜಿಲ್ಲಾ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಮಾತನಾಡಿ, ರಘುರಾಮ ಶೆಟ್ಟರ ಹೆಸರಿನಲ್ಲಿ ಅದ್ಬುತವಾದ ಶಕ್ತಿ ಇದೆ. ಅವರ ಹೆಸರನ್ನು ಉಳಿಸಿ-ಬೆಳೆಸುವ ಸಲುವಾಗಿ ಬ್ರಹ್ಮಾವರ ಪತ್ರಕರ್ತರ ಸಂಘ ನಡೆಸುತ್ತಿರುವ ಈ ಕಾರ್ಯಕ್ರಮ ಶ್ಲಾಘನೀಯ ಎಂದರು.
ಸಾಮಾಜಿಕ ಚಿಂತಕ ಉದಯ ಶೆಟ್ಟಿ ಪಡುಕರೆ ಮಾತನಾಡಿ, ಇಂದಿನ ಪ್ರತಿಕೋದ್ಯಮ ಕ್ಷೇತ್ರಕ್ಕೆ ವಡ್ಡರ್ಸೆಯವರ ಚಿಂತನೆಗಳನ್ನು ಅತೀ ಅಗತ್ಯ .ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದರು.
ಆ.4ರಂದು ಬ್ರಹ್ಮಾವರ ಬಂಟರಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿಯವರು ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ತಿಳಿಸಿದರು.
ವಡ್ಡರ್ಸೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೊತ್ತಾಡಿ ಉದಯ ಕುಮಾರ್ ಶೆಟ್ಟಿ, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸತೀಶ್ ಕುಂದರ್, ಮುಖ್ಯ ಶಿಕ್ಷಕ ಕೊತ್ತಾಡಿ ಸಂತೋಷ ಶೆಟ್ಟಿ ಹಾಗೂ ಜಿಲ್ಲಾ ಸಂಘದ ಪ್ರತಿನಿಧಿ ಗಣೇಶ ಸಾೈಬ್ರಕಟ್ಟೆ, ಬ್ರಹ್ಮಾವರ ಪತ್ರಕರ್ತರ ಸಂಘದ ಕೋಶಾಧಿಕಾರಿ ಮೋಹನ್ ಉಡುಪ, ಪತ್ರಕರ್ತ ಕೆ.ಜಿ. ವೈದ್ಯ, ಪ್ರವೀಣ್ ಮುದ್ದೂರು, ರವೀಂದ್ರ ಕುಮಾರ್ ಕೋಟ, ಶೇಷಗಿರಿ ಭಟ್, ಪ್ರವೀಣ್ ಬ್ರಹ್ಮಾವರ, ಶಿವರಾಮ ಆಚಾರ್ಯ ಬಂಡೀಮಠ, ಹರೀಶ್ ಕಿರಣ್ ತುಂಗ, ನಾಗರಾಜ್ ಅಲ್ತಾರು ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಚಾಲಕ ವಸಂತ್ ಗಿಳಿಯಾರು ಸ್ವಾಗತಿಸಿ, ಸಂಘದ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷ ಚಂದ್ರಶೇಖರ್ ಬೀಜಾಡಿ ವಂದಿಸಿದರು.