ವಳಕಾಡು ಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಉಡುಪಿ: ಸರಕಾರದ ವತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವ ಬೈಸಿಕಲ್ಲನ್ನು ಉಡುಪಿಯ ಉಸ್ತುವಾರಿ ಸಚಿವರಾದ ಪ್ರಮೋದ್ ಮಧ್ವರಾಜ್ ಉಡುಪಿ ವಳಕಾಡಿನ ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ಎಸ್. ಡಿ. ಎಮ್. ಸಿ. ಉಪಾಧ್ಯಕ್ಷೆ ಲ| ಇಂದು ರಮಾನಂದ ಭಟ್, ಪ್ರೌಢಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಮೃತ್ ಶೆಣೈ, ಪ್ರಾಥಮಿಕ ಶಾಲಾ ಎಸ್. ಡಿ. ಎಮ್. ಸಿ. ಅಧ್ಯಕ್ಷ ನಾಗಭೂಷಣ ಶೇಟ್ ಹಾಗೂ ಎಸ್. ಡಿ. ಎಮ್. ಸಿ. ಸದಸ್ಯರಾದ ಸದಾಶಿವ ರಾವ್, ಚಂದ್ರಿಕಾ ಶೇಟ್, ಆಶಾಲತಾ, ದೇವರಾಯ ಕಾಮತ್, ಉಮೇಶ್ ನಾಯಕ್, ಯಜ್ಞೇಶ್ ಆಚಾರ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಅವರು ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು.