ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ (ಅ.15) ಸೂಚಿಸಿದೆ.
ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.