ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ಸಚಿವ ನಾಗೇಂದ್ರ (B Nagendra) ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಇಂದು (ಜೂನ್ 06) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಗೇಂದ್ರ ಅವರು ಇಂದು (ಜೂನ್ 07) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ನೀಡಿದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಿಂದ ನಿರ್ಗಮಿಸಿದರು.