ವಿಟ್ಲ: ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಮೇಲೆ ಫೈರಿಂಗ್
ವಿಟ್ಲ: ಇಂಟೆಕ್ ಮುಖಂಡ, ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಫೈರಿಂಗ್ ನಡೆದಿದೆ ಎಂದು ತಿಳಿದುಬಂದಿದೆ.
ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.