ವಿಟ್ಲ: ಸಿಲಿಂಡರ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Spread the love

ವಿಟ್ಲ: ಸಿಲಿಂಡರ್ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ.

ಮಿತ್ತೂರು ಮತ್ತು ಕೊಡಾಜೆ ಎಂಬಲ್ಲಿ ಮನೆಯಿಂದ ಅನಿಲ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ವಸ್ತುಗಳು ಕಳ್ಳತನ ನಡೆದಿತ್ತು. ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾಧ ತಂಡದ ಸಿಬ್ಬಂದಿಗಳು ಮಾಣಿ ಗ್ರಾಮದ ಮಾಣಿ ಜಂಕ್ಷನ್ ನಲ್ಲಿ ಇಬ್ಬರನ್ನು ಆಟೋ ರಿಕ್ಷಾ ಸಹಿತ ವಶಕ್ಕೆ ಪಡೆದುಕೊಂಡಿದ್ದರು. ವಿಟ್ಲ ಠಾಣೆಯ ಮಿತ್ತೂರು, ಕೊಡಾಜೆ ಮನೆ ಕಳವು ಎರಡು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಎರಡು ಪ್ರಕರಣಗಳಲ್ಲಿ ಭಾಗಿಯಾಗಿವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.50 ಲಕ್ಷ ರೂ ಎಂದು ಅಂದಾಜಿಸಲಾಗಿದೆ.


Spread the love