ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Spread the love

ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಸೆರೆ

ಮಂಗಳೂರು: ಮಂಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಮೂವರನ್ನು ಗಾಂಜಾ ಮತ್ತು ಮಾರಾಟ ಮಾಡಲು ಉಪಯೋಗಿಸಿದ ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಕೊಂಚಾಡಿ ದೆರೆಬೈಲು ನಿವಾಸಿ ಲಾಯ್ ವೇಗಸ್ (24), ಫಳ್ನೀರ್ ನಿವಾಸಿ ಅಲ್ಮೇಡ್ ಕರ್ಕಡ (24) ಮತ್ತು ಕದ್ರಿ ಕಂಬಳ ನಿವಾಸಿ ಪ್ರದೀಪ್ ಪ್ರಭು (27) ಎಂದು ಗುರುತಿಸಲಾಗಿದೆ.

ಅಗೂಸ್ತ್ 3 ರಂದು ಮಂಗಳೂರು ಪೂರ್ವ (ಕದ್ರಿ) ಪೊಲೀಸ್ ಠಾಣಾ ವ್ಯಾಪ್ತಿಯ ಕದ್ರಿ ಕಂಬ್ಲ ರಸ್ತೆಯ ಬಳಿಯ ಭಾರತ್ ಬೀಡಿ ಕಾಂಪ್ಲೆಕ್ಸ್ ಎದುರುಗಡೆಯಲ್ಲಿ ಬಜಾಜ್ ಪ್ಲಾಟಿನಾ ಬೈಕೊಂದರಲ್ಲಿ ಮೂವರು ಯುವಕರು ವಿದ್ಯಾರ್ಥಿಗಳಿಗೆ  ಹಾಗೂ ಸಾರ್ವಜನಿಕರಿಗೆ  ಅಕ್ರಮವಾಗಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಗಾಂಜಾವನ್ನು ಮಾರಾಟ ಮಾಡುತ್ತಿದ್ದ  ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಅವರಿಂದ ಒಟ್ಟು 1 ಕೆಜಿ 200 ಗ್ರಾಂ ಗಾಂಜಾ,  ಕೆಎ19-ಇಸಿ-3912  ಬಜಾಜ್ ಪ್ಲಾಟಿನ ದ್ವಿಚಕ್ರ ವಾಹನ, ಹಾಗೂ 3 ಮೊಬೈಲ್ ಫೋನ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಬೈಕ್ ಹಾಗೂ ಮೊಬೈಲ್ ಫೋನ್ ಗಳ ಒಟ್ಟು ಮೌಲ್ಯ ರೂ. 68,500/- ಆಗಿರುತ್ತದೆ. ಈ ಗಾಂಜಾವನ್ನು ಆರೋಪಿಗಳು ಶಿಕಾರಿಪುರ ಕಡೆಯಿಂದ ಖರೀದಿ ಮಾಡಿ ಮಂಗಳೂರು ನಗರದಲ್ಲಿ ಮಾರಾಟ ಮಾಡಲು ತಂದಿರುವುದಾಗಿದೆ. ಆರೋಪಿಗಳ  ಪೈಕಿ ಲಾಯಿ ವೇಗಸ್ ಎಂಬಾತನ ವಿರುದ್ಧ  ಹಿಂದೆ ಕಾವೂರು, ಉರ್ವಾ, ಬರ್ಕೆ, ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು, ಹಲ್ಲೆ, ಅಪಹರಣ, ಮುಂತಾದ  ಸುಮಾರು 9 ಪ್ರಕರಣಗಳು ದಾಖಲಾಗಿರುತ್ತದೆ. ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಪೊಲೀಸ್ ಕಮೀಷನರ್ ಟಿ. ಆರ್ ಸುರೇಶ್ ರವರ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿ.ಸಿ.ಪಿ   .ಕೆ.ಎಂ. ಶಾಂತರಾಜು, ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿ.ಸಿ.ಪಿ ಯವರಾದ    ಹನುಮಂತರಾಯ ಮತ್ತು ಎಸಿಪಿ ಸಿಸಿಆರ್ ಬಿ  ವೆಲೆಂಟೈನ್ ಡಿ ಸೋಜಾ  ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಸುನೀಲ್ ವೈ ನಾಯ್ಕ್ ಮತ್ತು ಪಿ.ಎಸ್.ಐ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿಗಳು  ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.

 


Spread the love