Home Mangalorean News Kannada News ವಿದ್ಯಾರ್ಥಿಗಳು ಕೀಳರಿಮೆ ತೊರೆದು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು

ವಿದ್ಯಾರ್ಥಿಗಳು ಕೀಳರಿಮೆ ತೊರೆದು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು

Spread the love

ವಿದ್ಯಾರ್ಥಿಗಳು ಕೀಳರಿಮೆ ತೊರೆದು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು

ಧರ್ಮಸ್ಥಳ: ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಯೊಂದಿಗೆ ಸಮಾಜದ ಸಭ್ಯ, ಸುಸಂಸ್ಕøತ ನಾಗರಿಕರನ್ನು ರೂಪಿಸುವುದೇ ಶಿಕ್ಷಣದ ಧ್ಯೇಯವಾಗಿದೆ. ವಿದ್ಯಾರ್ಥಿಗಳು ಜಿಜ್ಞಾಸುಗಳಾಗಿ ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಅದರ ಅನುಭವವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಜೀವನ ಪಾವನವಾಗುತ್ತದೆ. ಬದುಕು ಸಾರ್ಥಕವಾಗುತ್ತದೆ ಎಂದು ಬೆಂಗಳೂರಿನ ಚಲನಚಿತ್ರ ನಿರ್ದೇಶಕಿ ರೂಪಾ ಅಯ್ಯರ್ ಹೇಳಿದರು.

dharmasthala-book-release-00

ಅವರು ಧರ್ಮಸ್ಥಳದಲ್ಲಿ ಶನಿವಾರ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಪ್ರಕಟಿಸಲಾದ “ಜ್ಞಾನಗಂಗಾ” ಮತ್ತು “ಜ್ಞಾನಸುಧಾ” ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಭಕ್ತಿ ಮಾರ್ಗವು ನಮಗೂ ದೇವರಿಗೂ ನೇರ ಸಂಪರ್ಕ ಕಲ್ಪಿಸುವ ಮಾಧ್ಯಮವಾಗಿದೆ. ಇಚ್ಛಾಶಕ್ತಿಯಿಂದ ದೃಢ ಸಂಕಲ್ಪದೊಂದಿಗೆ ನಾವು ಜ್ಞಾನ ಮಾರ್ಗದಿಂದ ಉನ್ನತ ಸಾಧನೆ ಮಾಡಬಹುದು. ವಿದ್ಯಾರ್ಥಿಗಳು ಕೀಳರಿಮೆ ತೊರೆದು ಆತ್ಮವಿಶ್ವಾಸ ಮತ್ತು ಆತ್ಮ ಗೌರವ ಬೆಳೆಸಿಕೊಳ್ಳಬೇಕು.

ಯುವ ಪೀಳಿಗೆ ದುಶ್ಚಟಕ್ಕೆ ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದ ಅವರು ಅನೇಕ ದೊಡ್ಡ ವ್ಯಕ್ತಿಗಳು ದುಶ್ಚಟ, ದುವ್ರ್ಯಸನಗಳಿಂದ ಇಂದು ಅಕಾಲಿಕ ಸಾವನ್ನಪ್ಪುತ್ತಿರುವುದು ದುರಂತವಾಗಿದೆ ಎಂದರು.

ಧರ್ಮಸ್ಥಳದಲ್ಲಿ ಎಂಟು ಶತಮಾನಗಳಿಂದ ನಿತ್ಯೋತ್ಸವವಾಗಿರುವ ಚತುರ್ವಿಧ ದಾನಗಳ ಬಗ್ಯೆ ಅವರು ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿದರು. ಯೋಗ, ಧ್ಯಾನ, ಪ್ರಕೃತಿ ಚಿಕಿತ್ಸೆ ಮತ್ತು ಆಯುರ್ವೇದ ಪದ್ಧತಿ ಬಗ್ಯೆ ನೀಡುತ್ತಿರುವ ಪ್ರೋತ್ಸಾಹವನ್ನು ಅವರು ಶ್ಲಾಘಿಸಿದರು.

ಹೇಮಾವತಿ ವಿ. ಹೆಗ್ಗಡೆ ಮಾತನಾಡಿ, ಸತ್ಯವನ್ನು ನುಡಿಯಬೇಕು, ಧರ್ಮ ಮಾರ್ಗದಲ್ಲಿ ನಡೆಯಬೇಕು. ಸಜ್ಜನರ ಸಹವಾಸದೊಂದಿಗೆ, ಮನಸ್ಸಿನ ನಿಯಂತ್ರಣದೊಂದಿಗೆ ಸದ್ವಿಚಾರಗಳನ್ನು ಮನನ ಮಾಡಬೇಕು. ಪರಿಶುದ್ಧ ಜೀವನದಿಂದ ಸಿದ್ಧಿ-ಸಾಧನೆ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ, ಪ್ರತಿ ವರ್ಷ ಎರಡು ಪುಸ್ತಕಗಳನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ವಿತರಿಸುವ ಯೋಜನೆಯನ್ನು ಮುಂದಿನ ವರ್ಷದಿಂದ ರಾಜ್ಯಮಟ್ಟಕ್ಕೆ ವಿಸ್ತರಿಸಲಾಗುವುದು ಎಂದು ಪ್ರಕಟಿಸಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ಪುಸ್ತಕಗಳನ್ನು ಓದಿ ವಿವೇಕ ಮತ್ತು ವಿಮರ್ಶಾ ಗುಣಗಳನ್ನು ಬೆಳೆಸಿಕೊಳ್ಳಬೇಕು. ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಸಮಾಜದ ಸಭ್ಯ ನಾಗರಿಕರಾಗಬೇಕು ಎಂದು ಆಶಿಸಿದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.

ಯೋಗ ನಿರ್ದೇಶಕ ಶಶಿಕಾಂತ ಜೈನ್ ಸ್ವಾಗತಿಸಿದರು. ಯೋಗ ಶಿಕ್ಷಕ ಬಾಲಕೃಷ್ಣ ರೆಖ್ಯ ಧನ್ಯವಾದವಿತ್ತರು. ದಕ್ಷಿಣ ಕನ್ನಡ ಜಿಲ್ಲಾ ಯೋಗ ಸಂಘಟಕ ಶೇಖರ ಕಡ್ತಲ ಕಾರ್ಯಕ್ರಮ ನಿರ್ವಹಿಸಿದರು.


Spread the love

Exit mobile version