Home Mangalorean News Kannada News ವಿದ್ಯಾರ್ಥಿಗಳು ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ಹೆಚ್ಚಲಿದೆ – ಪ್ರಖ್ಯಾತ್ ಶೆಟ್ಟಿ

ವಿದ್ಯಾರ್ಥಿಗಳು ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ಹೆಚ್ಚಲಿದೆ – ಪ್ರಖ್ಯಾತ್ ಶೆಟ್ಟಿ

Spread the love

ವಿದ್ಯಾರ್ಥಿಗಳು ಸಂಘಟನೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ಹೆಚ್ಚಲಿದೆ – ಪ್ರಖ್ಯಾತ್ ಶೆಟ್ಟಿ

ಉಡುಪಿ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಗೆ ಸಂಘಟನೆಗಳಲ್ಲಿ ಗುರುತಿಸಿಕೊಂಡಾಗ ಅವರಲ್ಲಿ ನಾಯಕತ್ವದ ಗುಣ ಹೆಚ್ಚಾಗಲು ಸಾಧ್ಯವಾಗುತ್ತದೆ ಇದರಿಂದ ದೇಶದ ಅಭಿವೃದ್ಧಿಯಲ್ಲಿ ಇನ್ನೂ ಹೆಚ್ಚು ಸಕ್ರೀಯವಾಗಿ ಪಾಲ್ಗೊಳ್ಳಲು ಸಾಧ್ಯವಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಶನಿವಾರ ಉಡುಪಿ ಕಿದಿಯೂರು ಹೊಟೇಲ್ನ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಕರ್ನಾಟಕ ವಿದ್ಯಾರ್ಥಿ ಪರಿಷತ್ನ ಉಡುಪಿ ಜಿಲ್ಲಾ ಘಟಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ‘ವಿದ್ಯಾರ್ಥಿ ಸಂಘಟನೆಗಳಿಂದ ನಾಯಕತ್ವದ ತರಬೇತಿ ಸಿಗುತ್ತದೆ. ಇದನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ಹಾಗೆಯೇ ವಿದ್ಯಾರ್ಥಿ ಸಂಘಟನೆಗಳ ನಡುವೆ ಆರೋಗ್ಯಕರ ಸ್ಪರ್ಧೆ ಇರಬೇಕು. ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸುವ ಕಡೆಗೆ ಹೆಚ್ಚು ಗಮನಹರಿಸಬೇಕು’ ಎಂದು ಸಲಹೆ ನೀಡಿದರು.

‘ಸ್ಥಳೀಯ, ರಾಜ್ಯ ಹಾಗೂ ದೇಶದ ಸಮಸ್ಯೆಯ ಕುರಿತು ತಿಳಿ ವಳಿಕೆ ಹೊಂದಬೇಕು. ಸರ್ಕಾರ ಕೈಗೊಳ್ಳುವ ಪ್ರಮುಖ ನಿರ್ಧಾರಗಳ ಬಗ್ಗೆ ಅರಿವು ಹೊಂದಬೇಕು. ಅದರ ಬಗ್ಗೆ ತಮ್ಮೊಳಗೆ ಚರ್ಚೆ ಮಾಡಬೇಕು. ವಿದೇಶಿ ಬಂಡವಾಳದ ಹೂಡಿಕೆ ಕಡಿಮೆ ಯಾಗಿ ಉದ್ಯೋಗ ಸೃಷ್ಟಿ ಆಗದಿದ್ದರೆ ಸ್ವಂತ ಉದ್ಯೋಗ ಮಾಡಲು ಸಜ್ಜಾಗಬೇಕು. ಅದಕ್ಕೆ ಬೇಕಾಗುವ ಪೂರ್ವ ತಯಾರಿಯನ್ನು ಮೊದಲೇ ಮಾಡಬೇಕು’ ಎಂದು ಹೇಳಿದರು.

‘ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ ಪರಿಷತ್ನ ಲಾಂಛನವನ್ನು ಅನಾವರಣಗೊಳಿ ಸಿದರು. ಕುಂದಾಪುರದ ಉದ್ಯಮಿ ಸುರೇಂದ್ರ ಶೆಟ್ಟಿ, ಕಾರ್ಕಳದ ಉದ್ಯಮಿ ಉದಯ ಕುಮಾರ್ ಶೆಟ್ಟಿ ಮುನಿಯಾಲು,

ನಗರಸಭೆ ಸದಸ್ಯರಾದ ವಿಜಯ ಪೂಜಾರಿ ಬೈಲೂರು, ಪ್ರಭಾಕರ ಪೂಜಾರಿ ಮುಖ್ಯ ಅತಿಥಿಗಳಾಗಿದ್ದರು. ಉದ್ಯಮಿಗಳಾದ ವಿನೋದ್ ಕುಮಾರ್ ಅಂಬಲಪಾಡಿ, ಸದಾನಂದ ಕಾಂಚನ್, ಸುಹಾನ್ ಬಿ. ಶೆಟ್ಟಿ, ರಂಜನ್ ಸಾಲಿಯಾನ್ , ಅಶ್ವಿತ್ ಶೆಟ್ಟಿ ಉಪಸ್ಥಿತರಿದ್ದರು.


Spread the love

Exit mobile version