Home Mangalorean News Kannada News ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್​ ಅಶೋಕ್ ಆಯ್ಕೆ

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್​ ಅಶೋಕ್ ಆಯ್ಕೆ

Spread the love

ವಿಧಾನಸಭೆ ವಿಪಕ್ಷ ನಾಯಕನಾಗಿ ಆರ್​ ಅಶೋಕ್ ಆಯ್ಕೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಆರ್​.ಅಶೋಕ್​ ಆಯ್ಕೆ ಆಗಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಾಯಿತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿತ್ತು.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ನಡೆದ ಬಿಎಲ್​ಪಿ ಸಭೆಯಲ್ಲಿ ಹೈಕಮಾಂಡ್ ವೀಕ್ಷಕರಾದ ನಿರ್ಮಲಾ, ದುಷ್ಯಂತ್ ಕುಮಾರ್ ಉಪಸ್ಥಿತರಿದ್ದರು. ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ರಾಜ್ಯ ಬಿಜೆಪಿ ಘಟಕದ ಸಂಘಟನಾ ಕಾರ್ಯದರ್ಶಿ ರಾಜೇಶ್ ಮತ್ತಿತರರು ಭಾಗವಹಿಸಿದ್ದರು.

ಶಾಸಕರನ್ನು ಉದ್ದೇಶಿಸಿ ಭಾಷಣದ ವೇಳೆ ವಿಪಕ್ಷ ನಾಯಕರ ವಿಚಾರವಾಗಿ ಹೈಕಮಾಂಡ್ ಸೂಚನೆಯನ್ನು ಸೂಚ್ಯವಾಗಿ ದುಶ್ಯಂತ್ ಕುಮಾರ್ ಗೌತಮ್ ಮತ್ತು ಬಿ.ಎಸ್‌. ಯಡಿಯೂರಪ್ಪ ಪ್ರಸ್ತಾಪಿಸಿದರು. ಅಶೋಕ್ ಹೆಸರು ಘೋಷಣೆಗೆ ಮಾಜಿ ಸಿಎ ಬಸವರಾಜ ಬೊಮ್ಮಾಯಿ ಸೂಚಿಸಿದರೆ, ಮಾಜಿ ಸಚಿವ ಸುನೀಲ್ ಕುಮಾರ್ ಅನುಮೋದನೆ ಮಾಡಿದರು.

ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ಸ್ಫೋಟ
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಹೈಕಮಾಂಡ್​ ವೀಕ್ಷಕರು ಪ್ರಮುಖರ ಜೊತೆ ಸಭೆ ನಡೆಸಿದ್ದರು. ವರಿಷ್ಠರ ನಿರ್ಧಾರ ಬಗ್ಗೆ ಆಕಾಂಕ್ಷಿಗಳ ಗಮನಕ್ಕೆ ತಂದಿದ್ದರು. ಇದೇ ವೇಳೆ ಆರ್​ ಅಶೋಕ್ ನೇಮಕ ಕುರಿತು ತಿಳಿಸಿದಾಗ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಹೈಕಮಾಂಡ್ ತೀರ್ಮಾನ ಒಪ್ಪದೆ ಸಭೆಯಿಂದ ತೆರಳಿದ್ದಾರೆ. ಬಿಎಲ್​ಪಿ ಸಭೆ ಸಭೆಗೂ ಮುನ್ನವೇ ಹೊರನಡೆದಿದ್ದಾರೆ.

ಸಭೆಗೆ ಹಾಜರಾದ ಶಾಸಕರು ಯಾರೆಲ್ಲ?
ಗೋಪಾಲಯ್ಯ, ಸುರೇಶ್ ಕುಮಾರ್, ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ, ಸಿಮೆಂಟ್ ಮಂಜು, ಹರೀಶ್ ಪೂಂಜ, ಎಸ್. ಮುನಿರಾಜು, ಸುರೇಶ್ ಗೌಡ, ಬಸವರಾಜ್ ಬೊಮ್ಮಾಯಿ, ಶೈಲೇಂದ್ರ ಬೆಳ್ದಾಳೆ, ಜ್ಯೋತಿ ಗಣೇಶ್, ಬಸವರಾಜ್ ಮತ್ತಿಮೂಡ್, ಅರವಿಂದ್ ಬೆಲ್ಲದ್, ದೊಡ್ಡನಗೌಡ ಪಾಟೀಲ್, ಅಭಯ್ ಪಾಟೀಲ್, ಮಂಜುಳ ಲಿಂಬಾವಳಿ, ಸಿ.ಸಿ. ಪಾಟೀಲ್, ಚನ್ನಬಸಪ್ಪಮ ಎಂ. ಕೃಷ್ಣಪ್ಪ, ಸುನಿಲ್ ಕುಮಾರ್, ಚಂದ್ರಪ್ಪ, ಮುನಿರತ್ನ, ಸಿದ್ದು ಸವದಿ, ಭಾಗೀರಥಿ ಮುರುಳ್ಯ

ಸಭೆಗೆ ಹಾಜರಾದ ವಿಧಾನ ಪರಿಷತ್ ಸದಸ್ಯರು ಯಾರೆಲ್ಲ?
ಎಂ.ಕೆ. ಪ್ರಾಣೇಶ್, ಸುಜಾ ಕುಶಾಲಪ್ಪ, ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್, ಕೇಶವ ಪ್ರಸಾದ್, ಗಣಪತಿ ಉಳ್ವೇಕರ್, ತುಳಸಿ ಮುನಿರಾಜು ಗೌಡ, ಶಶೀಲ್ ನಮೋಶಿ, ಅ. ದೇವೇಗೌಡ, ವೈ.ಎ. ನಾರಾಯಣಸ್ವಾಮಿ, ಪ್ರತಾಪ್ ಸಿಂಹ ನಾಯಕ್, ರುದ್ರೇಗೌಡ, ರಘುನಾಥ್ ರಾವ್ ಮಲ್ಕಾಪುರೆ


Spread the love

Exit mobile version