Home Mangalorean News Kannada News ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ: ಮೂವರ ಬಂಧನ

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಆರೋಪ ಪ್ರಕರಣ: ಮೂವರ ಬಂಧನ

Spread the love

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಪ್ರಕರಣ: ಮೂವರ ಬಂಧನ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿಯೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಗ್ಗೆ ಸ್ವಯಂ ಪ್ರೇರಿತವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದ ವಿಧಾನಸೌಧ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳ ಬಂಧನವನ್ನು ಖಚಿತಪಡಿಸಿರುವ ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. FSL ವರದಿ, ಸಾಂದರ್ಭಿಕ ಸಾಕ್ಷ್ಯಗಳು, ಆರೋಪಿಗಳ ಹೇಳಿಕೆ ಹಾಗೂ ತನಿಖೆ ವೇಳೆ ಸಿಕ್ಕ ಸಾಕ್ಷ್ಯಗಳ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಸದ್ಯ ಆರೋಪಿಗಳನ್ನು ಬಂಧಿಸಿದ್ದು ವೈದ್ಯಕೀಯ ಪರೀಕ್ಷೆ ನಡೀತಾ ಇದೆ. ವೈದ್ಯಕೀಯ ಪರೀಕ್ಷೆ ಬಳಿಕ ಕೋರಮಂಗಲದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿ ಬಳಿಕ ಕಸ್ಟಡಿಗೆ ಪಡೆಯಲಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್ ಸ್ಯಾಂಪಲ್ಸ್ಗಳನ್ನ ಎಫ್ಎಸ್ಎಲ್ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್ಗಳನ್ನ ಸಂಗ್ರಹಿಸಲಾಗಿದ್ದು, ಎಫ್ಎಸ್ಎಲ್ ತಂಡ ಪರಿಶೀಲನೆ ಮಾಡಿದೆ. ಘಟನೆ ನಡೆದ ದೃಶ್ಯಗಳನ್ನು ಸಹ ರವಾನಿಸಲಾಗಿತ್ತು.


Spread the love

Exit mobile version