ವಿಧಾನ ಪರಿಷತ್ತಿಗೆ ಉಪ ಚುನಾವಣೆ ಘೋಷಣೆ, ನೀತಿ ಸಂಹಿತೆ ಜಾರಿ – ಜಿಲ್ಲಾಧಿಕಾರಿ ಮುಲೈ ಮುಗಿಲನ್

Spread the love

ವಿಧಾನ ಪರಿಷತ್ತಿಗೆ ಉಪ ಚುನಾವಣೆ ಘೋಷಣೆ, ನೀತಿ ಸಂಹಿತೆ ಜಾರಿ – ಜಿಲ್ಲಾಧಿಕಾರಿ ಮುಲೈ ಮುಗಿಲನ್

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಭಾರತದ ಚುನಾವಣಾ ಆಯೋಗ ಅ.21ರಂದು ಚುನಾವಣೆ ದಿನಾಂಕ ಪ್ರಕಟಿಸಿರುವುದಾಗಿ ಚುನಾವಣಾ ಧಿಕಾರಿ ಮತ್ತು ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಹಮ್ಮಿಕೊಂಡ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಪ್ರತಿನಿಧಿಸಿದ್ದ ಕೋಟಾ ಶ್ರೀನಿವಾಸ ಪೂಜಾರಿಯವರು ಲೋಕ ಸಭಾ ಚುನಾವಣೆಗೆ ಸ್ಪರ್ಧಿಸಿ ಜಯಗಳಿಸಿ ಸಂಸದರಾಗಿ ಆಯ್ಕೆಯಾದ ಕಾರಣ ತೆರವಾದ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ಘೋಷಣೆಯಾಗಿದೆ.

ಸೆ.26ರಿಂದ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಅ.3ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ.21ರಂದು ಬೆಳಗ್ಗೆ 8ರಿಂದ ಸಂಜೆ 4ಗಂಟೆಯ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಟ್ಟು392 ಮತಗಟ್ಟೆ ಗಳಲ್ಲಿ 6037 ಮತದಾರರು ಮತಚ ಲಾಯಿಸಲಿದ್ದಾರೆ. ಅ.24ರಂದು ಮತ ಎಣಿಕೆ ನಡೆಯಲಿದೆ. ಅ.28ರವರೆಗೆ ಅಧಿಸೂಚನೆಯ ಪ್ರಕ್ರಿಯೆ ಇರುತ್ತದೆ ಎಂದು ಮುಲೈ ಮುಗಿಲನ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ದ.ಕ.ಜಿಲ್ಲಾ ಹಿರಿಯ ಪೊಲೀಸ್ ಆಯುಕ್ತ ಯತೀಶ್ ಎನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.

ಇಂದಿನಿಂದಲೇ ನೀತಿ ಸಂಹಿತೆ ಜಾರಿ

ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಅ.21ರಂದು ಚುನಾವಣೆ ನಡೆಯುವ ಕಾರಣ ಸೆ.19ರಿಂದ ಅ28 ರವರೆಗೆ ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಸಂದರ್ಭದಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಹೊಸ ಯೋಜನೆ ಕಾರ್ಯಕ್ರಮ ನೀತಿಯನ್ನು ಪ್ರಕಟಿಸುವಂತಿಲ್ಲ ಎಂದು ಚುನಾವಣಾಧಿಕಾರಿ ಮತ್ತು ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.


Spread the love