ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Spread the love

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ನಾಪಮತ್ರ ಸಲ್ಲಿಸಲು ನಾಳೆಯೇ(ಜೂನ್ 03) ಕೊನೆ ದಿನವಾಗಿದೆ.

ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಹೈಕಮಾಂಡ್ ಕೊನೆಗೂ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮೂಳೆ ಅವರಿಗೆ ಮಣೆ ಹಾಕಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ.


Spread the love