ವಿನಯ್ ಕುಮಾರ್ ಸೊರಕೆ ನಾಮಪತ್ರ: ಚುನಾವಣಾ ಪ್ರಚಾರಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ
ಕಾಪು: ಕಾಪು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸೊರಕೆ ನಾಮಪತ್ ಇಂದು ಸಲ್ಲಿಸಿದರು. ಚುನಾವಣಾಧಿಕಾರಿ ಕುಮುದಾ ಅವರಿಗೆ ನಾಮಪತ್ರ ಸಲ್ಲಿಸಿದರು.
ಪ್ರಚಾರದ ಅಖಾಡಕ್ಕೆ ರಾಹುಲ್ ಗಾಂಧಿ ಮತ್ತೆ ಪ್ರಿಯಾಂಕ ಗಾಂಧಿ: ಈ ಬಾರಿ ಕರಾವಳಿಯಲ್ಲಿ ಚುನಾವಣಾ ಪ್ರಚಾರಕ್ಕೆ ರಾಹುಲ್ ಮತ್ತು ಪ್ರಿಯಾಂಕ ಗಾಂಧಿ ಆಗಮಿಸಲಿದ್ದಾರೆ ಎಂದು ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ಬೂತ್ ಮಟ್ಟದಲ್ಲಿ ಹೆಚ್ಚಿನ ಒತ್ತುಕೊಟ್ಟು ಚುನಾವಣಾ ಪ್ರಚಾರ ಮಾಡಲಾಗುವುದು ಎಂದು ಅವರು ಈ ಸಂದರ್ಭ ಹೇಳಿದ್ದಾರೆ. ಅಲ್ಲದೇ ಕ್ಷೇತ್ರದ ಅಲ್ಲಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಆಯೋಜನೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ನಾಮಪತ್ರದ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ,ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ವಕೀಲರಾದ ಪಾಂಗಾಳ ಹರೀಶ್ ಶೆಟ್ಟಿ, ಜಿ. ಪಂ. ಸದಸ್ಯ ವಿಲ್ಸನ್ ರೊಡ್ರಿಗಸ್ ಕಾಂಗ್ರೆಸ್ ಮುಖಂಡ ರಾದ ಇಬ್ರಾಹಿಂ ಮನ್ಹಾರ್ ಉಪಸ್ಥಿತರಿದ್ದರು