ವಿನಿಶಾ ರೊಡ್ರಿಗಸ್ ಗೆ ದಾಂತಿ ಪುರಸ್ಕಾರ ಪ್ರದಾನ
ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇವರು ಕನ್ನಡ ಭಾಶೆಯಲ್ಲಿ ಕ್ರೈಸ್ತ ಸಾಹಿತಿಗಳು ಬರೆದಿರುವ ಪುಸ್ತಕಗಳಿಗೆ ವರ್ಷಪ್ರತಿ ನೀಡಲಾಗುವ ದಿವಗಂತ ದಾಂತಿ ಪುರಸ್ಕಾರಕ್ಕೆ 2023 ನೇ ಸಾಲಿಗೆ ವಿನಿಶಾ ರೊಡ್ರಿಗಸ್ ಇವರ ಎತ್ತಿನಗಾಡಿ ಎಕ್ಸ್ ಪ್ರೆಸ್ – 2 ಪುಸ್ತಕ ಆಯ್ಕೆಯಾಗಿದ್ದು ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ಅಂಬಾಗಿಲು ಸಮೀಪದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆಯಿತು.
ಪ್ರಶಸ್ತಿ ಪುರಸ್ಕಾರವು ರೂ 25 ಸಾವಿರ ನಗದಿನೊಂದಿಗೆ ಶಾಲು, ನೆನಪಿನ ಕಾಣಿಕೆಯನ್ನು ಹೊಂದಿದ್ದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ| ಡೆನಿಸ್ ಡೆಸಾ ಪ್ರದಾನ ಮಾಡಿದರು.
ಇದೇ ವೇಳೆ ಧರ್ಮಪ್ರಾಂತ್ಯ ಮಟ್ಟದ ದಿ|ಡೆನಿಸ್ ಡಿಸಿಲ್ವಾ ಲೇಖನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಕೂಡ ಜರುಗಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಿನಿಶಾ ರೊಡ್ರಿಗಸ್ ಅವರು ಯುವಜನತೆ ಇಂದು ಸಾಮಾಜಿಕ ಜಾಲತಾಣಗಳತ್ತ ಹೆಚ್ಚಿನ ಆಸಕ್ತಿ ತೋರುತ್ತಿದ್ದು ಪುಸ್ತಕಗಳನ್ನು ಕೊಂಡು ಓದುವವರ ಸಂಖ್ಯೆ ವಿರಳವಾಗುತ್ತಿದೆ. ಯುವಜನರನನ್ನು ಪುಸ್ತಕಗಳನ್ನು ಒದುವತ್ತ ಪ್ರೋತ್ಸಾಹ ನೀಡುವ ಕೆಲಸ ನಡೆಯಬೇಕು ಎಂದರು.
ಪ್ರಶಸ್ತಿ ಪುರಸ್ಕೃತರ ಪರಿಚಯವನ್ನು ದಿವಗಂತ ದಾಂತಿ ಪುರಸ್ಕಾರ ಸಮಿತಿ ಸಂಚಾಲಕ ಆಲ್ಫೋನ್ಸ್ ಡಿಕೋಸ್ತಾ ನೆರವೇರಿಸಿದರೆ ದಿ|ಡೆನಿಸ್ ಡಿಸಿಲ್ವಾ ಲೇಖನ ಸ್ಪರ್ಧೆಯ ವಿಜೇತರ ವಿವರವನ್ನು ಸಂಚಾಲಕ ಡಾ|ಜೆರಾಲ್ಡ್ ಪಿಂಟೊ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಣ್ಯ ಸಂರಕ್ಷಾಣಾಧಿಕಾರಿ ಕ್ಲಿಫರ್ಡ್ ಲೋಬೊ, ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷರಾದ ಜಾನ್ ಡಿಸಿಲ್ವಾ, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನಿಕಟಪೂರ್ವ ಅಧ್ಯಕ್ಷರಾದ ಮೇರಿ ಡಿಸೋಜಾ, ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಉಪಾಧ್ಯಕ್ಷರಾದ ಸೊಲೊಮನ್ ಆಲ್ವಾರಿಸ್, ಸಹಕಾರ್ಯದರ್ಶಿ ಲೂಯಿಸ್ ಡಿಸೋಜಾ, ಲೆಸ್ಲಿ ಕರ್ನೆಲಿಯೋ, ವಲಯ ಅಧ್ಯಕ್ಷರಾದ ರೋಸಿ ಕ್ವಾಡ್ರಸ್, ಜುಲಿಯೆಟ್ ಡಿಸೋಜಾ, ವಿಲ್ಸನ್ ಡಿ ಆಲ್ಮೇಡಾ, ವಿಲ್ಸನ್ ಮಸ್ಕರೇನಸ್, ಶಾಂತಿ ಪಿರೇರಾ ಉಪಸ್ಥಿತರಿದ್ದರು.