Spread the love
ವಿಮಾನ ನಿಲ್ದಾಣದಲ್ಲೇ ಕಾಂಗ್ರೆಸ್ ನಿಯೋಗ ಪೊಲೀಸರ ವಶಕ್ಕೆ
ಮಂಗಳೂರು: ಗೋಲಿಬಾರ್ ಹಾಗೂ ಪರಿಸ್ಥಿತಿಯ ಅವಲೋಕನಕ್ಕಾಗಿ ಮಂಗಳೂರಿಗೆ ತೆರಳಿದ್ದ ಕಾಂಗ್ರೆಸ್ ನಿಯೋಗವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರು ಮಂಗಳೂರಿಗೆ ತೆರಳಲು ಸಿದ್ಧತೆ ನಡೆಸಿ, ಶುಕ್ರವಾರ ಬೆಳಿಗ್ಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಎಂ.ಬಿ ಪಾಟೀಲ್ ಹಾಗೂ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದ ಮೊದಲ ತಂಡ ತೆರಳಿತ್ತು.
ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾಂಗ್ರೆಸ್ ನಿಯೋಗ ಗೋಲಿಬಾರ್ನಲ್ಲಿ ಮೃತಪಟ್ಟವರ ನಿವಾಸಕ್ಕೆ ತೆರಳಲು ಮುಂದಾದಾಗ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಆದರೆ ಕಾಂಗ್ರೆಸ್ ನಿಯೋಗ ಪಟ್ಟು ಹಿಡಿದಾಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ಮಂಗಳೂರು ವಿಮಾನ ನಿಲ್ದಾಣದಲ್ಲಿಯೇ ನಿಯೋಗವನ್ನು ಪೊಲೀಸರು ವಶಕ್ಕೆ ಪಡೆದು ಅವರನ್ನು ಮಂಗಳೂರು ನಗರದೊಳಗೆ ಬಿಟ್ಟುಕೊಳ್ಳಲಿಲ್ಲ.
Spread the love