ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮೇಯರ್ ಮನವಿ

Spread the love

ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಮೇಯರ್ ಮನವಿ 

ಮಂಗಳೂರು :ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ 50 ಕೋಟಿ ರೂ. ಬಿಡುಗಡೆ ಮಾಡುವಂತೆ ಹಾಗೂ ಮಂಗಳೂರು ಪಾಲಿಕೆಯಲ್ಲಿ ಖಾಲಿ ಇರುವ ಅಧಿಕಾರಿಗಳ ಹಾಗೂ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮೇಯರ್ ಕವಿತಾ ಸನಿಲ್ ಅವರು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಹಾಗೂ ದ.ಕ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉಪಸ್ಥಿತರಿದ್ದರು.


Spread the love