ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ ಎಬಿವಿಪಿ ಗೂಂಡಾಗಿರಿಗೆ ಎನ್ ಎಸ್ ಯು ಐ ಖಂಡನೆ

Spread the love

ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಉಂಟುಮಾಡಿರುವ ಎಬಿವಿಪಿ ಗೂಂಡಾಗಿರಿಗೆ ಎನ್ ಎಸ್ ಯು ಐ ಖಂಡನೆ

ಎಬಿವಿಪಿ ಸಂಘಟನೆಯು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಂಕಪಟ್ಟಿ ಬಿಡುಗಡೆಗೊಳಿಸುವಂತೆ ಮಂಗಳ ಗಂಗೋತ್ರಿಯಲ್ಲಿ ಪ್ರತಿಭಟನೆಯ ನೆಪದಲ್ಲಿ ಗೂಂಡಾಗಿರಿ ನಡೆಸಿದ್ದು, ವಿಶ್ವವಿದ್ಯಾನಿಲಯದ ಗಾಜುಗಳಿಗೆ ಹಾನಿ ಮಾಡಿರುವುದಲ್ಲದೆ, ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಇದನ್ನು ಎನ್ ಎಸ್ ಯು ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ ಮತ್ತು ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲು ಆಗ್ರಹಿದೆ

ಅಂಕಪಟ್ಟಿ ವಿಷಯಕ್ಕೆ ಸಂಬಂಧಿಸಿದಂತೆ ಎನ್ ಎಸ್ ಯು ಐ ಜಿಲ್ಲಾ ಮತ್ತು ಉಳ್ಳಾಲ ಸಮಿತಿ ವತಿಯಿಂದ ಸಭಾಧ್ಯಕ್ಷರಾದ ಯು.ಟಿ ಖಾದರ್ ಮತ್ತು ಉನ್ನತ ಶಿಕ್ಷಣ ಸಚಿವರಾದ ಎಂ.ಸಿ ಸುಧಾಕರ್ ರವರ ಗಮನಕ್ಕೆ ತಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿ ಈ ಸಮಸ್ಯೆಯನ್ನು ಪರಿಹರಿಸುವ ಭರವಸೆ ನೀಡಿದ್ದಾರೆ.

ಆದರೆ ಇದೀಗ ಎಬಿವಿಪಿ ಸಂಘಟನೆಯು ರಾಜಕೀಯ ಲಾಭಕ್ಕೋಸ್ಕರ ವಿಶ್ವವಿದ್ಯಾನಿಲಯಕ್ಕೆ ನುಗ್ಗಿ ಹಾನಿ ಮಾಡಿರುವ ಜೊತೆಗೆ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ. ಶಿಕ್ಷಣ ಸಂಸ್ಥೆಗಳನ್ನು ದೇವಾಲಯದಂತೆ ಕಾಣುವ ಸಮಾಜದಲ್ಲಿ ಎಬಿವಿಪಿ ಕಾರ್ಯಕರ್ತರ ಈ ವರ್ತನೆಯು ಅವರ ನೈಜ ಮುಖವಾಡವನ್ನು ತೋರಿಸುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆಯು ಗೂಂಡಾಗಿರಿ ನಡೆಸಿದವರನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ.


Spread the love