ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ
ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಆಗಸ್ಟ್ 12 ಮತ್ತು 13 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿ ನಡೆಯಲಿದೆ.
ವಿಜ್ಞಾನ ನಿಕಾಯ, ವಾಣಿಜ್ಯ ನಿಕಾಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನವು ಅದೇ ದಿನ ಸಿಂಡಿಕೇಟು ಸಂಭಾಂಗಣ, ವಿಶ್ವವಿದ್ಯಾನಿಲಯದ ಆಡಳಿತ ಸೌಧ, ಮಂಗಳಗಂಗೋತ್ರಿ ಕೊಣಾಜೆ ಇಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವೆಬ್ಸೈಟ್ (www.mangaloreuniversity.ac.in) ನಲ್ಲಿ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.