ವಿ. ಪರಿಷತ್ ಉಪಚುನಾವಣೆ: ರಾಜು ಪೂಜಾರಿ ಅವರ ಗೆಲುವಿಗೆ ಎಲ್ಲರೂ ಶಕ್ತಿ ಮೀರಿ ಪ್ರಯತ್ನ
ಉಡುಪಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ನಗರಸಭಾ ಸದಸ್ಯರು ಹಾಗೂ ಸ್ಥಳೀಯ ಮುಖಂಡರನ್ನು ಭೇಟಿಯಾಗಿ ಮತದಾನದ ಬಗ್ಗೆ ಚರ್ಚಿಸಲು ಇಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ವಿಧಾನಪರಿಷತ್ ಉಪಚುನಾವಣೆಯ ಅಭ್ಯರ್ಥಿಗಳಾದ ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನಪರಿಷತ್ ಸದಸ್ಯರು ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ ಹಾಗೂ ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಂ.ಎಸ್ ಮೊಹಮ್ಮದ್, ವೆರೋನಿಕಾ ಕರ್ನೇಲಿಯೋ, ನಿತ್ಯಾನಂದ ಶೆಟ್ಟಿ, ದಿನಾಕರ್ ಹೇರೂರು, ಮಮತಾ ಶೆಟ್ಟಿ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತ್ಗಳ ಸದಸ್ಯರು, ನಗರಸಭಾ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಸದಸ್ಯರು, ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಉಪಸ್ಥಿತರಿದ್ದು ಉಪಚುನಾವಣೆಯ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಅಭ್ಯರ್ಥಿಯಾದ ರಾಜು ಪೂಜಾರಿ ಅವರ ಗೆಲುವಿಗೆ ಎಲ್ಲರೂ ಶಕ್ತಿ ಮೀರಿ ಪ್ರಯತ್ನ ಮಾಡಬೇಕೆಂದು ಎಲ್ಲರಲ್ಲಿ ಮನವಿ ಮಾಡಲಾಯಿತು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದಿನಕರ್ ಹೇರೂರು ಅವರ ಧನ್ಯವಾದ ಸಲ್ಲಿಸಿದರು