Home Mangalorean News Kannada News ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

Spread the love

ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೊರೋನ ವೈರಸ್ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆತಂಕದ ನಡುವೆಯೂ ಸಾಮಾಜಿಕ ಜಾಲತಾಣಗಳಲ್ಲಿ ವೆನ್ಲಾಕ್ ಆಸ್ಪತ್ರೆ ಬಗ್ಗೆ ಅಪಪ್ರಚಾರ ನಡೆಸಿರುವ ಘಟನೆ ಸೋಮವಾರ ನಡೆದಿದ್ದು, ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಆಸ್ಪತ್ರೆಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ಇತರ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಕರೋನ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನ ಪಾಸಿಟಿವ್ ಪತ್ತೆಯಾಗಿದ್ದು, ಇನ್ನೊಬ್ಬ ಕೊರೋನ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

ಜನರು ಊಹಾಪೋಹಗಳನ್ನು ನಂಬದಂತೆ, ಜಿಲ್ಲಾಡಳಿತ, ರಾಜ್ಯ, ರಾಷ್ಟ್ರ ಸಂಪೂರ್ಣವಾಗಿ ಜನರ ಆರೋಗ್ಯ ಕಾಳಜಿಗೆ ಕಟಿಬದ್ಧವಾಗಿದೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.


Spread the love

Exit mobile version