ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗಳಿಗೆ ಆರೋಗ್ಯ ಆಯುಕ್ತರ ಭೇಟಿ

Spread the love

ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗಳಿಗೆ ಆರೋಗ್ಯ ಆಯುಕ್ತರ ಭೇಟಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಾ. ಕೆ.ಬಿ. ಶಿವಕುಮಾರ್ ಅವರು ಭಾನುವಾರ ಮಂಗಳೂರಿಗೆ ಆಗಮಿಸಿ, ಜಿಲ್ಲಾ ವೆನ್ ಲಾಕ್ ಹಾಗೂ ಲೇಡಿಗೋಷನ್ ಆಸ್ಪತ್ರೆಗಳಿಗೆ ಭೇಟಿ ನೀಡಿದರು.

ಮೊದಲು ವೆನ್ ಲಾಕ್ ಗೆ ಆಗಮಿಸಿದ ಅವರು, ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ದೊರಕುತ್ತಿರುವ ಸೌಲಭ್ಯಗಳ ಮಾಹಿತಿ ಪಡೆದ ಅವರು, ಸ್ವಚ್ಛತೆ ಮತ್ತು ಆಸ್ಪತ್ರೆ ಪರಿಸರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವೆನ್ ಲಾಕ್ ಮೂಲಸೌಕರ್ಯವನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಹಾಗೂ ಸಿಬ್ಬಂಧಿ ನೇಮಕಾತಿಯ ಬಗ್ಗೆ ಬೇಡಿಕೆ ಬಂದಿದ್ದು, ಸರಕಾರದ ಮಟ್ಟದಲ್ಲಿ ಇದನ್ನು ಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ಬಳಿಕ ಲೇಡಿಗೋಷನ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಅಲ್ಲಿನ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ನವಜಾತ ಶಿಶುಘಟಕ ವೀಕ್ಷಿಸಿದ ಅವರು, ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಸ್ಥಾಪನೆಯಿಂದ ಶಿಶುಮರಣ ಪ್ರಮಾಣ ಕಡಿಮೆಗೊಂಡಿರುವುದಕ್ಕೆ ಶ್ಲಾಘಿಸಿದರು. ಸಿಎಸ್ಆರ್ ಅನುದಾನದಿಂದ ರೋಗಿಗಳಿಗೆ ಅತ್ಯಾಧುನಿಕ ಸೌಲಭ್ಯ ಗಳನ್ನು ಒದಗಿಸಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಮತ್ತಿತರರು ಇದ್ದರು.


Spread the love
Subscribe
Notify of

0 Comments
Inline Feedbacks
View all comments